ಕೊಲ್ಲೂರು: ಕ್ರೀಡಾ ಸಾಧಕರಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಛತ್ತೀಸ್‌ಘಡನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಜಿ.(ಪ್ರಥಮ ವಾಣ್ಯಿಜ್ಯ ವಿಭಾಗ) ಹಾಗೂ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದ ೯೬ ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರಥ್ವೀನ್ (ದ್ವಿತೀಯ ವಾಣಿಜ್ಯ ವಿಭಾಗ) ಇವರನ್ನು ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆ ಪ.ಪೂ ಶಿಕ್ಷಣ ಇಲಾಖೆಯ ಉಪನೀರ್ದೇಶಕ ಆರ್.ಬಿ ನಾಯಕ್ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಎಸ್ ಅರುಣ್‌ಪ್ರಕಾಶ್ ಶೆಟ್ಟಿ, ವೇದಮೂರ್ತಿ ಮಂಜುನಾಥ ಅಡಿಗ ಕರ್ಕಮುಡಿ, ಕೊಲ್ಲೂರು ಗ್ರಾಪಂ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಮಾವಿನಕಾರು, ಮಾಜಿ ಅಧ್ಯಕ್ಷ ಉದಯ ಶೇರುಗಾರ. ತಾಪಂ ಸದಸ್ಯೆ ಗ್ರೀಷ್ಮಾ ಜಿ. ಬಿಢೆ, ಮಾಜಿ ಸದಸ್ಯ ಕೆ. ರಮೇಶ್ ಗಾಣಿಗ, ಉದ್ಯಮಿ ಅರುಣ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸನತ್ ಅಡಿಗ, ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದು ಶುಭಹಾರೈಸಿದರು.

Call us

Click Here

Leave a Reply