ಭಂಡಾರ್‌ಕಾರ್ಸ್ ಕಾಲೇಜು : ಡಿಜಿಟಲ್ ಬ್ಯಾಂಕಿಂಗ್ ಮಾಹಿತಿ ಕಾರ್ಯಾಗಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪರಿವರ್ತನೆ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವಾಗ ಇಂದಿನ ದಿನಕ್ಕೆ ಹೊಂದಿಕೊಂಡು ಮುನ್ನಡೆಯುವ ಅಗತ್ಯವಿದೆ. ಕ್ಯಾಶ್‌ಲೆಸ್ ವ್ಯವಹಾರ ಸುರಕ್ಷತೆಯ ದೃಷ್ಠಿಯಿಂದ ಉಪಯುಕ್ತವಾಗಿದ್ದು ವೇಗವಾಗಿ ಜನಮನ್ನಣೆಗಳಿಸುತ್ತಿದೆ. ಆದುದರಿಂದ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಅನಿವಾರ್ಯವಾಗಲಿದೆ ಎಂದು ಕೆನರಾ ಬ್ಯಾಂಕ್ ಕುಂದಾಪುರ ಶಾಖೆಯ ಚೀಫ್ ಮೆನೇಜರ್ ಮ್ಯಾಕ್ಸಿಮ್ ಕ್ಯಾಸ್ತಲಿನಾ ಹೇಳಿದರು.

Call us

Click Here

ಅವರು ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜು ಹಾಗೂ ಹಳೆ ವಿದ್ಯಾರ್ಥಿ ಸಂಘ ಮತ್ತು ಕೆನರಾ ಬ್ಯಾಂಕ್ ಕುಂದಾಪುರ ಶಾಖೆ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಡಿಜಿಟಲ್ ಬ್ಯಾಂಕಿಂಗ್ ಮಾಹಿತಿ ಕಾರ್ಯಗಾರ ಉದ್ಘಾಟಿಸಿ, ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಆಡಳಿತಾಧಿಕಾರಿ ಡಾ. ಹೆಚ್. ಶಾಂತಾರಾಮ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಂಡಾರ್‌ಕಾರ‍್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಭಂಡಾರ್‌ಕಾರ‍್ಸ್ ಪ. ಪೂ. ಕಾಲೇಜಿನ ಪ್ರಾಂಶುಪಾಲ ಪ್ರೋ. ಜಿ.ಎಂ. ಗೊಂಡ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕೆನರಾ ಬ್ಯಾಂಕ್‌ನ ಅತುಲ್ ಹಾಗೂ ಜಿನೇಶ್ ಮಾಹಿತಿ ನೀಡಿದರು. ಭಂಡಾರ್‌ಕಾರ‍್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ಥ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

Leave a Reply