ಫೆ.5-6: ಶ್ರೀ ಬಗಳಾಂಬ ತಾಯಿ ಪ್ರತಿಷ್ಠಾ ವರ್ಧಂತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಬಗಳಾಂಬ ತಾಯಿ ದೇವಸ್ಥಾನದ 15ನೇ ವರ್ಷದ ಪ್ರತಿಷ್ಠಾ ವರ್ಧಂತಿಮಹೋತ್ಸವ, ಚಂಡಿಕಾಯಾಗ ಶ್ರೀ ಗುರುಪರಾಶಕ್ತಿ ಮಠ, ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ವೇದಮೂರ್ತಿ ಕೆ. ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಫೆ ೦5 ಮತ್ತು ೦6ರಂದು ಜರುಗಲಿದೆ.

Call us

Click Here

ಫೆ೦5ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಗಣಯಾಗ, ಸತ್ಯನಾರಾಯಣ ಪೂಜೆ, ಗುರು ಸನ್ನಿಧಿಯಲ್ಲಿ ನವಕ ಪ್ರಧಾನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ವಾಸ್ತು ಪೂಜೆ, ಬ್ರಹ್ಮಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಅಧಿವಾಸ ಹೋಮ ಫೆ.೦6ರಂದು ಬೆಳಿಗ್ಗೆ 7ಕ್ಕೆ ಬ್ರಹ್ಮಕಲಶಾಭಿಷೇಕ, ಚಂಡಿಕಾಯಾಗ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನ ಸಂತರ್ಪಣೆ ಸಂಜೆ ೬ಕ್ಕೆ ಕುಂದಾಪುರ ಮದ್ದುಗುಡ್ಡೆಯ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿಯವರಿಂದ ಭಜನೆ, ರಾತ್ರಿ ೮ಕ್ಕೆ ಹೂವಿನ ಪೂಜೆ, ರಂಗ ಪೂಜೆ, ರಾತ್ರಿ ೯ಕ್ಕೆ ಶ್ರೀ ಬಪ್ಪನಾಡು ದಶಾವತಾರ ಯಕ್ಷಗಾನ ಮಂಡಳಿ, ಮೂಲ್ಕಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯಲಿದೆ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀದೇವಿಯ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿ, ತಾಯಿಯ ಕೃಪೆಗೆ ಪಾತ್ರರಾಗುವಂತೆ ಆಡಳಿತ ಮಂಡಳಿ ಹಾಗೂ ಉತ್ಸವ ಸಮಿತಿ ವಿನಂತಿಸಿದೆ.

Leave a Reply