ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ ಆಶ್ರಯದಲ್ಲಿ ಕರ್ನಾಟಕದಲ್ಲಿ 33 ವರ್ಷದ ಬಳಿಕ ಮೊದಲ ಬಾರಿಗೆ ಮೈಸೂರಿನಲ್ಲಿ ನಡೆದ 17ನೇ ರಾಷ್ಟ್ರೀಯ ಜಾಂಬೋರಿ ಸಮ್ಮೇಳನದಲ್ಲಿ ಭಾಗವಹಿಸಿದ ಕುಂದಾಪುರ ತಾಲೂಕಿನ ಬಿದ್ಕಲ್‌ಕಟ್ಟೆ ಸ.ಪ.ಪೂ. ಕಾಲೇಜಿನ ಉಪನ್ಯಾಸಕ ಹಾಗೂ ಸ್ಕೌಟ್ ಲೀಡರ್ ರವಿಚಂದ್ರ ಅವರಿಗೆ ಸಮ್ಮೇಳನದಲ್ಲಿ ಅತ್ಯುತ್ತಮ ವಯರ್‌ಲೆಸ್ ಕಮ್ಯೂನಿಕೇಶನ್ ಸೇವೆಗೆ ಇಂಡಿಯನ್ ಇನ್ಸಿಟ್ಯೂಟ್ ಆಫ್ ಹಾಮ್ಸ್ ಸಂಸ್ಥೆ ಪ್ರಶಸ್ತಿ ಪತ್ರ ನೀಡಿ ಪುರಸ್ಕರಿಸಿದೆ.





