ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆರೋಗ್ಯಯುವ ಜೀವನಕ್ಕೆ ಆಯುರ್ವೇದದ ದಿನಚರಿಗಳು ಹಾಗೂ ಆಹಾರ ಪದ್ಧತಿಗಳನ್ನು ಪಾಲಿಸಬೇಕು. ಆಯುರ್ವೇದ, ಮನೆಮದ್ದಿನ ಅರಿವು ಮೂಡಿಸಲು ಪ್ರಯತ್ನಿಸಬೇಕು. ವಿವಿಧ ಪ್ರದೇಶಗಳಲ್ಲಿ ಆಯುರ್ವೇದದ ಬಗ್ಗೆ ಕಾರ್ಯಾಗಾರ ನಡೆಸಿ ಜನರಿಗೆ ಆಯುರ್ವೇದದ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿಸಲು ಮುಂದಾಗಬೇಕು ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ಅವರು ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆಯುಷ್ ಇಲಾಖೆ ಉಡುಪಿ, ಹಾಗೂ ಸರಕಾರಿ ಆಯುಷ್ ಚಿಕಿತ್ಸಾಲಯ ಕಾಲ್ತೋಡು ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರದ ಹೊಟೇಲ್ ಶೆರೋನ್ ಸಭಾಂಗಣದಲ್ಲಿ ಜರಗಿದ ಒಂದು ದಿನದ ತಾಲೂಕು ಮಟ್ಟದ ಆಯುಷ್ ಸೆಮಿನಾರ್/ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಎಸ್.ಮೊಗವೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಪಂ ಉಪಾಧ್ಯಕ್ಷ ಪ್ರವೀಣ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಸದಸ್ಯರಾದ ನಾರಾಯಣ ಕೆ.ಗುಜ್ಜಾಡಿ, ರಾಜು ದೇವಾಡಿಗ ತ್ರಾಸಿ, ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ ಕಾವೇರಿ, ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ, ಮಂಜು ಕಾಳಾವರ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಅಲಕಾನಂದ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಂದರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಕಾಲ್ತೋಡು ಸರ್ಕಾರಿ ಆಯುಷ್ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ವಂದಿಸಿದರು.
ಬಳಿಕ ಉಡುಪಿ ಆಯುರ್ವೇದ ಕಾಲೇಜಿನ ಸ್ವಸ್ಥ ವೃತ್ತ ವಿಭಾಗದ ವೈದ್ಯರುಗಳಾದ ಡಾ.ಸುಮಾ ಮಲ್ಯ, ಡಾ.ವಿಜಯ ನೆಗಳ್ಕೂರ್, ಡಾ.ಮಹಮ್ಮದ್ ಫೈಸಲ್ ಅವರು ಆಯುರ್ವೇದ ಸಿದ್ಧಾಂತ, ಆರೋಗ್ಯ-ಯೋಗ ಹಾಗೂ ಮನೆಮದ್ದಿನ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಶಿಬಿರಾರ್ಥಿಗಳಿಗೆ ಉಪನ್ಯಾಸ ಮಾಹಿತಿ ನೀಡಿದರು. ಸುಮಾರು ೬೯ ಮಂದಿ ಶಿಬಿರಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.