Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿಯಲ್ಲಿ ಸಂಕಷ್ಟ ಚತುರ್ಥಿ ಮಹಾಪೂಜೆ ಸಂಪನ್ನ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿಯಲ್ಲಿ ಸಂಕಷ್ಟ ಚತುರ್ಥಿ ಮಹಾಪೂಜೆ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಮೀಪದ ಕಾರಣಿಕ ಕ್ಷೇತ್ರ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ ನಡೆದ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾ ಗಣಯಾಗ(೧೦೦೮ ತೆಂಗಿನಕಾಯಿ) ನವಚಂಡಿ ಹವನ ಮತ್ತು ಸಂಕಷ್ಟಹರ ಚತುರ್ಥಿ(ಅಂಗಾರಿಕಾ) ಮಹಾಪೂಜೆ ಸಕಲ ಧಾರ್ಮಿಕ ವಿಧಿ ವಿಧಾನದಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಋತ್ವಿಜರ ವೇದಮಂತ್ರ ಘೋಷದೊಂದಿಗೆ ಸಾಂಗವಾಗಿ ನೆರವೇರಿತು.

    Click Here

    Call us

    Click Here

    ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಶ್ರೀದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಹಸ್ರ ನಾಳಿಕೇರ ಮಹಾ ಗಣಯಾಗ, ನವಚಂಡಿ ಹವನ, ಸಂಕಷ್ಟಹರ ಚತುರ್ಥಿ ಪೂಜೆಯಲ್ಲಿ ಪಾಲ್ಗೊಂಡು ಕೃಥಾರ್ತರಾದರು. ಧಾರ್ಮಿಕ ಮಹೋತ್ಸವದ ಅಂಗವಾಗಿ ನವಗ್ರಹ ಹವನ, ಬ್ರಹ್ಮಣಸ್ಪತಿಸೂಕ್ತ ಹವನ, ಶ್ರೀಸೂಕ್ತ ಹವನ, ಪುರುಷ ಸೂಕ್ತ ಹವನ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮತ್ತು ಹವನ, ಧನ್ವಂತರಿ ಹವನ, ನವಾಕ್ಷರೀ ಮಂತ್ರಜಪ ಹಾಗೂ ಹವನ, ರುದ್ರಪಾರಾಯಣ ಹಾಗೂ ರುದ್ರ ಹವನ, ದುರ್ಗಾ ಹೋಮ, ಅಥರ್ವಶೀರ್ಷ ಹವನ, ಲಲಿತ ಸಹಸ್ರನಾಮ ಹವನ, ಚಂಡಿಕಾ ಪಾರಾಯಣ, ಅಧಿವಾಸ ಹವನ, ಕಲಾತತ್ವ ಹವನ, ಶ್ರೀ ಸ್ವಾಮಿಗೆ ೧೦೮ ಕಲಶಾಭಿಷೇಕ, ಕನಕಾಭಿಷೇಕ ವಿದ್ಯುಕ್ತವಾಗಿ ಜರುಗಿತು.

    ಫೆ.೧೨ರಂದು ರಾತ್ರಿ ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿಯವರಿಂದ ಚೂಡಾಮಣಿ-ಲಂಕಾದಹನ ಯಕ್ಷಗಾನ, ಫೆ.೧೩ರಂದು ರಾತ್ರಿ ರೂಪಕಲಾ ಕುಂದಾಪುರದವರಿಂದ ಹಾಸ್ಯ ನಾಟಕ, ಫೆ.೧೪ರಂದು ಸಂಜೆ ೪ ಗಂಟೆಗೆ ಶಿವಮೊಗ್ಗ ಜಿಲ್ಲೆಯ ಮತ್ತೂರಿನ ಹೆಸರಾಂತ ಗಮಕ ವಾಚಕರಾದ ಡಾ. ಸನತ್ ಕುಮಾರ ಅವರ ಗಮಕ ವಾಚನ, ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತ ವೇ.ಮೂ. ಮಾರ್ಕಂಡೇಯ ಅವಧಾನಿ ಅವರು ಗಮಕ ವ್ಯಾಖ್ಯಾನ ಮನೋಜ್ಞವಾಗಿ ಮೂಡಿ ಬಂತು. ಪ್ರತಿದಿನ ಸಂಜೆ ಕದ್ರಿ ರಮೇಶನಾಥ್ ಮತ್ತು ಹರಿದಾಸ ಡೋಗ್ರ ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ಕಛೇರಿ ನಡೆಯಿತು. ದೇವಳವನ್ನು ತಳಿರು ತೋರಣ, ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್, ಪ್ರಧಾನ ಅರ್ಚಕರಾದ ಬಾಲಚಂದ್ರ ಭಟ್, ಹಟ್ಟಿಯಂಗಡಿ ಶ್ರೀ ಸಿಧ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ್‌ಕುಮಾರ್, ಅರ್ಚಕ ವೃಂದ ಮೊದಲಾದವರು ಉಪಸ್ಥಿತರಿದ್ದರು.

    Shri Siddivinayaka Temple Hattiyangadi
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    four × three =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.