ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಭಂಡಾರ್‌ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜ್ ಯೂತ್ ರೆಡ್ ಕ್ರಾಸ್ ಘಟಕ ಮತ್ತು ರಾ.ಸೇ.ಯೋ ಆಶ್ರಯದಲ್ಲಿ ಅಗ್ನಿ ಸುರಕ್ಷತಾ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸದಸ್ಯ ಸಂತೋಷ ಪೀಟರ್ ಡಿಸೋಜ ಸಂಪನ್ಮೂಲ ವ್ಯಕ್ತಿಯಾಗಿ, ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಮುನ್ನೆಚ್ಚರಿಕಾ ಕ್ರಮ ಮತ್ತು ಅಗ್ನಿ ಅನಾಹುತ ಸಂಭವಿಸಿದಾಗ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ನಾರಾಯಣ ತಂತ್ರಿ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ನಿತಿನ್ ಮಂಗಳೂರು, ಎನ್.ಎಸ್.ಎಸ್. ಅಧಿಕಾರಿ ಅರುಣ ಮತ್ತು ರಾಮಚಂದ್ರ ಆಚಾರಿ ಉಪಸ್ಥಿತರಿದ್ದರು. ಸಂಯೋಜಕ ಪ್ರೊ. ಸತ್ಯನಾರಾಯಣ ಸ್ವಾಗತಿಸಿ, ಎನ್.ಎಸ್.ಎಸ್. ವಿದ್ಯಾರ್ಥಿ ಸಚಿನ್ ವಂದಿಸಿದರು.