ಕುಂದಾಪ್ರ ಡಾಟ್ ಕಾಂ ಸುದ್ದಿ.
ಬ್ಯೆಂದೂರು: ಉಡುಪಿ ಜಿ.ಪಂ, ಕೃಷಿ ಇಲಾಖೆ ಕುಂದಾಪುರ, ಕೆ.ಆರ್.ಐ.ಡಿ.ಎಲ್ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಬ್ಯೆಂದೂರಿನಲ್ಲಿ ನಿರ್ಮಾಣವಾದ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡವನ್ನು ಬ್ಯೆಂದೂರು ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು ಸರಕಾರ ರೈತರ ಅಭಿವೃದ್ದಿಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ.ಬಡ್ಡಿಮನ್ನಾ ಪ್ರಸ್ತಾವನೆ ಬಗ್ಗೆ ಸರಕಾರದ ಚಿಂತನೆಯಿದೆ.ಬರಗಾಲ ಪೀಡಿತ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಕಲ್ಪಿಸಲಾಗಿದೆ.ರೈತ ಸಂಪರ್ಕ ಕೇಂದ್ರದ ಮೂಲಕ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ರೈತರಿಗೆ ತಲುಪುವ ಕೆಲಸವಾಗಬೇಕು ಎಂದರು.ಕುಂದಾಪುರ ತಾ.ಪಂ ಅಧ್ಯಕ್ಷೆ ಜಯಶ್ರೀ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯರಾದ ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ಗೌರಿ ದೇವಾಡಿಗ, ಕೆ.ಡಿ.ಪಿ ಸದಸ್ಯ ಎಸ್.ರಾಜು ಪೂಜಾರಿ, ತಾ.ಪಂ ಉಪಾಧ್ಯಕ್ಷ ಪ್ರವೀಣ ಕುಮಾರ್ ಕಡ್ಕೆ, ತಾಲೂಕು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹೇಂದ್ರ ಪೂಜಾರಿ, ತಾ.ಪಂ ಸದಸ್ಯ ಪುಷ್ಪರಾಜ್ ಶೆಟ್ಟಿ, ಮಾಲಿನಿ.ಕೆ, ವಿಜಯ್ ಶೆಟ್ಟಿ ಕಾಲ್ತೋಡು, ಗ್ರೀಷ್ಮಾ ಗಿರಿಧರ ಭಿಡೆ, ಖಂಬದಕೋಣೆ ರೈ.ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ ನಾಯ್ಕ ಮೊದಲಾವರು ಉಪಸ್ಥಿತರಿದ್ದರು.
ಸಹಾಯಕ ಕೃಷಿ ನಿರ್ದೇಶಕ ವಿಠಲ್ ರಾವ್ ಸ್ವಾಗತಿಸಿದರು. ಬ್ಯೆಂದೂರು ಕೃಷಿ ಅದಿಕಾರಿ ಗಾಯತ್ರಿ ಕಾರ್ಯಕ್ರಮ ನಿರ್ವಹಿಸಿದರು. ಉಡಪಿ ಎ.ಡಿ.ಒ ಮೋಹನ್‌ರಾಜ್ ವಂದಿಸಿದರು. ಪತ್ರಕರ್ತ ಅರಣಕುಮಾರ್ ಶಿರೂರು ಕಾರ್ಯಕ್ರಮ ನಿರೂಪಿಸಿದರು.