ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ದೇವರಿಗೆ ಭಕ್ತಿ ಪ್ರಧಾನವೇ ಹೊರತು ನಾವು ಅರ್ಪಿಸುವ ವಸ್ತುಗಳಲ್ಲ. ಸಂಸ್ಕಾರ, ಸಂಸ್ಕೃತಿಯನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಮನುಷ್ಯನಿಗೆ ಜಾತಿ ಮುಖ್ಯವಲ್ಲ ನೀತಿ ಮುಖ್ಯ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಭಜನೆಯಿಂದ ಭಗವಂತ ಒಲಿದು ಸುಖ ಶಾಂತಿ ನೆಮ್ಮದಿ ಲಭಿಸಿ ಸಮಾಜದ ಏಳಿಗೆ ಸಾಧ್ಯವಾಗುತ್ತದೆ ಎಂದು ಬಾರ್ಕೂರು ಸಂಸ್ಥಾನ ಮಠಾಧೀಶರಾದ ವಿದ್ಯಾವಾಚಸ್ಪತಿ ಡಾ. ಶ್ರೀ ಸಂತೋಷ ಗುರೂಜಿ ಹೇಳಿದರು.
ಅವರು ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನದ ಶಿವರಾತ್ರಿ ಮಹೋತ್ಸವ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿಯ ೬೩ನೇ ವಾರ್ಷಿಕೋತ್ಸವ ಹಾಗೂ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ೪೩ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ದೇವಸ್ಥಾನದ ಅಧ್ಯಕ್ಷ ಸದಾಶಿವ ಜಿ.ಕೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ ಶುಭ ಹಾರೈಸಿದರು. ಕುಂದಾಪುರ ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಪುಟಾಣಿಗಳಿಗೆ ಬಹುಮಾನ ವಿತರಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ನರಸಿಂಹ ಕೆ., ಯುವಕ ಮಂಡಲದ ಗೌರವಾಧ್ಯಕ್ಷ ಲಕ್ಷ್ಮಣ (ದತ್ತ) ಉಪಸ್ಥಿತರಿದ್ದರು.
ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ನಾಗರಾಜ ಎನ್.ಡಿ. ಸ್ವಾಗತಿಸಿದರು. ದೇವಸ್ಥಾನದ ಗೌರವಾಧ್ಯಕ್ಷ, ತಾಪಂ ಸದಸ್ಯ ನಾರಾಯಣ ಕೆ. ಗುಜ್ಜಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜತೆ ಕಾರ್ಯದರ್ಶಿ ನಿತೇಶ್ ಎನ್.ಡಿ. ವರದಿ ವಾಚಿಸಿದರು. ರಾಜು ಎನ್.ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು. ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರಘುವೀರ ಕೆ. ವಂದಿಸಿದರು.