ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಉತ್ತರಪ್ರದೇಶ, ಉತ್ತರಾಖಂಡ ಸಹಿತ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಗಣನೀಯ ಸಾಧನೆಗಾಗಿ ಕುಂದಾಪುರ, ಬೈಂದೂರು ಗಂಗೊಳ್ಳಿ ಬಿಜೆಪಿ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೈಂದೂರು ಬೈಪಾಸ್ ಬಳಿ, ತಲ್ಲೂರು ಪೇಟೆಯಲ್ಲಿ, ಕುಂದಾಪುರ ಮಂಡಲ ಬಿಜೆಪಿ ಕಛೇರಿಯಲ್ಲಿ ಹಾಗೂ ಗಂಗೊಳ್ಳಿಯ ಸ್ಥಾನೀಯ ಸಮಿತಿ ವತಿಯಿಂದ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಸಂಭ್ರಮ ನಡೆಸಲಾಯಿತು.
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯಭೇರಿ ಬಾರಿಸಿದ್ದು, ಮತದಾರರು ಬಿಜೆಪಿ ಕೈಹಿಡಿದಿದ್ದಾರೆ. ಈ ಚುನಾವಣೆ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ನೀಡಿದ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದ ಅವರು, ಉತ್ತರಪ್ರದೇಶದ ವಿಧಾನಸಭಾ ಚುನಾಚಣಾ ಫಲಿತಾಂಶ ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ಆಡಳಿತ ನಡೆಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.