ಕುಂದಾಪ್ರ ಡಾಟ್ ಕಾಂ ಸುದ್ದಿ.
ಜಾತ್ಯತೀತ ಜನತಾ ಪಕ್ಷದ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮರವಂತೆಯ ಮನ್ಸೂರ್ ಇಬ್ರಾಹಿಂ ನೇಮಕಗೊಂಡಿದ್ದಾರೆ. ಪಕ್ಷದ ಕಾರ್ಯಾಧ್ಯಕ್ಷರಾದ ಎಂ. ಎಸ್. ನಾರಾಯಣ ರಾವ್ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಈ ನೇಮಕ ಮಾಡಿದ್ದಾರೆ ಎಂದು ಜಿಲ್ಲಾಧ್ಯಕ್ಷ ಯೋಗೀಶ ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.