ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆನಂದ ಬಿಲ್ಲವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಗಂಗೊಳ್ಳಿಯ ಪ್ರಧಾನ ಕಛೇರಿಯಲ್ಲಿ ಜರಗಿದ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಹಿರಿಯ ನಿರ್ದೇಶಕ ವಾಸುದೇವ ಶೇರುಗಾರ್ ಅವರು ಮುಂದಿನ ಐದು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಆನಂದ ಬಿಲ್ಲವ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಾಸುದೇವ ಶೇರುಗಾರ್ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಇವರಿಬ್ಬರು ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯ ಸುಧೀರ್ ಕುಮಾರ್ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಬ್ಯಾಂಕಿನ ನಿರ್ದೇಶಕರಾದ ಕೆ.ಮಾಧವ ಖಾರ್ವಿ, ಹರೀಶ ಮೇಸ್ತ, ಸುಭಾಶ್ಚಂದ್ರ ಪೂಜಾರಿ, ಶ್ರೀನಿವಾಸ ಜತ್ತನ್, ಚಂದ್ರಶೇಖರ ಪೂಜಾರಿ, ನಾಗರಾಜ ಪೂಜಾರಿ, ಗೋಪಾಲ ನಾಯ್ಕ್ ಜಿ., ಆಶಾಲತಾ, ಯಮುನಾ, ನಾಗರಾಜ ಎಂ., ಲಕ್ಷ್ಮಣ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಗಾಣಿಗ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.