ಗರ್ಭಕೋಶ ತಪಾಸಣಾ ಶಿಬಿರ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಪಟ್ಟಣ ಪ್ರದೇಶಗಳಲ್ಲಿರುವ ಆಸ್ಪತ್ರೆಗಳು ಗ್ರಾಮೀಣ ಪ್ರದೇಶಗಳತ್ತ ಮುಖ ಮಾಡಬೇಕಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸಂರಕ್ಷಣೆ ಹಾಗೂ ಆರೋಗ್ಯ ಸೇವೆಯನ್ನು ನೀಡಲು ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಗಳು ಮುಂದೆ ಬರಬೇಕು. ಗ್ರಾಮೀಣ ಪ್ರದೇಶದ ಬಡ ಜನರಿಗೆ ಅತಿ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಕ್ರಮಕೈಗೊಳ್ಳಬೇಕು ಎಂದು ಗಂಗೊಳ್ಳಿ ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ಹೇಳಿದರು.

Call us

Click Here

ಉಡುಪಿ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಸ್ಫೂರ್ತಿ ಮಹಿಳಾ ಘಟಕ ಗಂಗೊಳ್ಳಿ, ಅಮೃತ ಮಹಿಳಾ ಸಂಘ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಯೆನಪೋಯ ಮೆಡಿಕಲ್ ಕಾಲೇಜು ಮಂಗಳೂರು ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಗರ್ಭಕೋಶ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನ ವೈದ್ಯ ಡಾ.ಇಬ್ರಾಹಿಂ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗರ್ಭಕೋಶದ ಕ್ಯಾನ್ಸರ್‌ನಿಂದ ಅತಿ ಹೆಚ್ಚು ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ. ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಅರಿವಿನ ಕೊರತೆ ಎದ್ದು ಕಾಣುತ್ತಿದೆ. ಆದ್ದರಿಂದ ಮಹಿಳೆಯರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುತ್ತಿರಬೇಕು. ಬಿಪಿಎಲ್ ಕಾರ್ಡ್ ಹೊಂದಿರುವ ಕ್ಯಾನ್ಸರ್ ರೋಗಿಗಳಿಗೆ ಯೆನಪೋಯ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಿಎಸ್‌ಒ ಡಾ.ವಾಸುದೇವ ಉಪಾಧ್ಯಾಯ, ಡಾ.ಪೂನಂ, ಡಾ.ಅಭಯ್, ಡಾ.ವಾಮನ, ಪೂರ್ಣಿಮಾ, ಗಂಗೊಳ್ಳಿ ಸ್ಫೂರ್ತಿ ಮಹಿಳಾ ಘಟಕದ ಅಧ್ಯಕ್ಷೆ ರೇವತಿ, ಗಂಗೊಳ್ಳಿ ಅಮೃತ ಮಹಿಳಾ ಸಂಘದ ಅಧ್ಯಕ್ಷೆ ಜೆಸಿಂತಾ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಉಪಸ್ಥಿತರಿದ್ದರು.

Leave a Reply