ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗ್ರಾಹಕರು ತಮ್ಮ ಹಕ್ಕುಗಳ ಬಗೆಗೆ ಜಾಗೃತರಾಗಿರಬೇಕು. ಲಭ್ಯವಿರುವ ಕಾನೂನಿನ ಬಗೆಗೆ ಒಂದಷ್ಟು ವಿಚಾರಗಳನ್ನು ತಿಳಿದುಕೊಂಡಿರಬೇಕು. ಆಗ ಮಾತ್ರ ಗ್ರಾಹಕರು ಶೋಷಣೆಗೊಳಗಾಗುವುದು ತಪ್ಪುತ್ತದೆ. ಮಾಹಿತಿಯ ಕೊರತೆಯೇ ಸೋಲಿಗೆ ಕಾರಣ. ಹಾಗಾಗಿ ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಅಗತ್ಯವಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದರು.
ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಬಾರ್ ಅಸೋಸಿಯೇಶನ್ ಕುಂದಾಪುರ, ಅಭಿಯೋಗ ಇಲಾಖೆ ಮತ್ತು ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ವಿಶ್ವ ಗ್ರಾಹಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕುಂದಾಪುರ ಬಾರ್ ಅಸೋಶಿಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ಕುಂದಾಪುರದ ಸಹಾಯಕ ಸರಕಾರಿ ಅಭಿಯೋಜಕ ಸಂದೇಶ್ ಭಂಡಾರಿ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ, ಗಂಗೊಳ್ಳಿಯ ಉದ್ಯಮಿ ಜಿ.ವೆಂಕಟೇಶ ಬಿ.ಶೆಣೈ ಶುಭ ಹಾರೈಸಿದರು. ಕುಂದಾಪುರ ಹಿರಿಯ ವಕೀಲ ಜಿ.ಸಂತೋಷಕುಮಾರ್ ಶೆಟ್ಟಿ ಮಾಹಿತಿ ನೀಡಿದರು.
ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಭಾಸ್ಕರ ಖಾರ್ವಿ ಸ್ವಾಗತಿಸಿದರು. ಕುಂದಾಪುರ ಬಾರ್ ಅಸೋಶಿಯೇಶನ್ ಪ್ರಧಾನ ಕಾರ್ಯದರ್ಶಿ ರವೀಶ್ಚಂದ್ರ ಶೆಟ್ಟಿ ಪ್ರಾಸ್ತಾವಿಕ ಮಾತುಗಳ್ನನಾಡಿದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಜಯರಾಮ್ ದೇವಾಡಿಗ ವಂದಿಸಿದರು.