ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪುರಾಣ ಪ್ರಸಿದ್ಧ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸಂಕಷ್ಟ ಹರ ಚತುರ್ಥಿಯ ಹಿನ್ನೆಲೆಯಲ್ಲಿ ವಿಶೇಷವಾಗಿ ಶ್ರೀದೇವರಿಗೆ ಸುಮಾರು 16 ಸಾವಿರ ಕಡಬು (ಮೂಡೆ) ನೈವೇದ್ಯ ಅನಂತರ ಭಕ್ತರಿಗೆ ಕಡುಬು (ಮೂಡೆ) ಪ್ರಸಾದ ವಿತರಣಾ ಕಾರ್ಯಕ್ರಮ ಜರುಗಿತು.
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಸಂಕಷ್ಟ ಹರ ಚತುರ್ಥಿಯ ಹಿನ್ನೆಲೆಯಲ್ಲಿ ಶ್ರೀದೇವರಿಗೆ ಸುಮಾರು 16 ಸಾವಿರ ಕಡುಬು (ಮೂಡೆ) ತಯಾರಿಯ ಪೂರ್ವ ಸಿದ್ಧತೆಗಾಗಿ ಸುಮಾರು ಒಂದು ವಾರದಿಂದಲೂ ಹಾಲಾಡಿ, ಹೊಸಂಗಡಿ ಮುಂತಾದ ಗ್ರಾಮೀಣ ಭಾಗದಿಂದ ಮುಂಡ್ಕನೊಲಿ ತಂದು 25 ಕ್ಕೂ ಹೆಚ್ಚು ಗ್ರಾಮೀಣ ಮಹಿಳೆಯರು ಕಡುಬಿನ ಓಲೆ ಕಟ್ಟಿದ್ದರು ಹಾಗೂ ಸುಮಾರು 500 ಕೆ.ಜಿ. ಅಕ್ಕಿ ಹಾಗೂ ಉದ್ದಿನ ಬೇಳೆ ಪ್ರಮಾಣಕ್ಕನುಸಾರವಾಗಿ ಐದು ಅರೆಯುವ ಯಂತ್ರಗಳನ್ನು ಬಳಸಿಕೊಂಡು 25 ಕ್ಕೂ ಅಧಿಕ ಮಂದಿ ನುರಿತ ಪಾಕಶಾಸ್ತ್ರಜ್ಞರು ಮಾ. 15ರ ರಾತ್ರಿಯಿಂದಲೇ ನಿರಂತರವಾಗಿ ಕಾರ್ಯನಿರ್ವಹಿಸಿದ್ದರು.