ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ದೇವಸ್ಥಾನದ ಬಳಿ ನಡೆದ ಬಸ್ಸು, ಟ್ಯಾಂಕರ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಶಿವಳ್ಳಿಯ ನಾರಾಯಣ ಆಚಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಬಸ್ಸಿನಲ್ಲಿದ್ದ ೪ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಇತರರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ವರದಿಯಾಗಿದೆ.
ಕುಂದಾಪುರ ಕಡೆಯಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ನಾಗೂರು ಆಂಜನೇಯ ದೇವಸ್ಥಾನದ ಬಳಿ ಬರುತ್ತಿದ್ದಂತೆ ಅಡ್ಡಲಾಗಿ ಬಂದ ಬೈಕ್ ಸವಾರನನ್ನು ತಪ್ಪಿಸುವ ಬರದಲ್ಲಿ ರಸ್ತೆಯ ಬಲಭಾಗಕ್ಕೆ ಸಂಚರಿಸಿದ್ದರಿಂದ ಎದುರಿನಿಂದ ಬರುತ್ತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿತ್ತು. ಬಸ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬೈಕಿಗೆ ಡಿಕ್ಕಿ ಹೊಡೆದ ಬಸ್ ಬಳಿ ಟ್ಯಾಂಕರ್‌ಗೂ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆಪಘಾತದ ತೀವ್ರತೆಗೆ ಬಸ್ಸು, ಟ್ಯಾಂಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗದಲ್ಲಿದ್ದ ಕೆಲವರು ಗಾಜು ಒಡೆದು ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಬಸ್ಸಿನಲ್ಲಿ ೪ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಉಳಿದವರಿಗೆ ೨೦ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡವರ ಹೆಸರು ಈವರೆಗೆ ತಿಳಿದು ಬಂದಿಲ್ಲ. ಬೈಂದೂರು ಪೊಲೀಸರು ಸ್ಥಳಕ್ಕೆ ಧಾಮಿಸಿದ್ದು ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಕುಂದಾಪುರ ಹಾಗೂ ಬೈಂದೂರಿನ ವಿವಿಧ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಯಿತು. ಕುಂದಾಪ್ರ ಡಾಟ್ ಕಾಂ.




















