ಬೈಂದೂರು-ಗಂಗೊಳ್ಳಿ: ಪಲ್ಸ್ ಪೊಲೀಯೋ ಅಭಿಯಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು/ಗಂಗೊಳ್ಳಿ : ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ರೋಟರಿ ಕ್ಲಬ್ ಬೈಂದೂರು ಸಹಕಾರದೊಂದಿಗೆ ಆಯೋಜಿಸಲಾದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಎಸ್. ರಾಜು ಪೂಜಾರಿ ಮಗುವಿಗೆ ಪೊಲೀಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

Call us

Click Here

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಕಾರದೊಂದಿಗೆ ಜರಗಿದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ಚಾಲನೆ ನೀಡಿ ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕಾರ್ಯದರ್ಶಿ ನಾರಾಯಣ ಇ.ನಾಯ್ಕ್ ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

 

?

Leave a Reply