ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಇವರ ನೇತೃತ್ವದಲ್ಲಿ ಸಮಾಜದ ೩೧ ವಟುಗಳಿಗೆ ಸಾಮೂಹಿಕ ಉಪನಯನ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ವಿಜಯ ಪೇಜಾತ್ತಾಯ ಇವರ ನೇತೃತದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ರಾಮನವಮಿ ಕಾರ್ಯಕ್ರಮದ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಇದೇ ಸಂದರ್ಭದಲ್ಲಿ ಸಮಾಜದ ಭಕ್ತ ವೃಂದದಿಂದ ಭಜನೆ ಮತ್ತು ನಾಮ ಸಂರ್ಕೀತನೆ ಕಾರ್ಯಕ್ರಮಗಳು ಜರುಗಿದವು.
ತಾಲೂಕು ಗಾಣಿಗ ಸೇವಾ ಸಂಘ ಅಧ್ಯಕ್ಷ ಶ್ರೀನಿವಾಸ ಗಾಣಿಗ, ಕಾರ್ಯದರ್ಶಿ ಶಿವಾನಂದ ಗಾಣಿಗ, ಕೋಶಧಿಕಾರಿ ಶಂಕರನಾರಾಯಣ ಗಾಣಿಗ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ನಿರ್ಮಾಣ ಸಮಿತಿ ಸದಸ್ಯರು, ಎಲ್ಲಾ ಘಟಕಗಳ ಅಧ್ಯಕ್ಷರು, ಮಹಿಳಾ ಸಂಘಟನೆಯ ಪದಾಧಿಕಾರಿಗಳು ಹಾಗೂ ಸಮಾಜ ಭಾಂದವರೂ ಉಪಸ್ಥಿತರಿದ್ದರು.