ಗೌರವ, ಭಕ್ತಿಯಿಂದಲೇ ಧರ್ಮದ ನೆಲೆಗಟ್ಟು ಗಟ್ಟಿಯಾಗಲಿದೆ: ಕೇಶವಮೂರ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಳೆದ ಹಲವು ವರ್ಷಗಳಿಂದ ಹಿಂದು ಸಮಾಜದ ಮೇಲೆ ನಿರಂತರವಾಗಿ ಅಕ್ರಮಣಗಳು, ಅನ್ಯಾಯ, ಮುಸ್ಲಿಮ್ ದೌರ್ಜನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಬೇಕಾದರೆ ಹಿಂದುತ್ವದ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಹಿಂದುತ್ವದ ಶಕ್ತಿ ಮೈಗೂಡಿಸಿಕೊಳ್ಳಬೇಕು. ಭಾರತದ ಶ್ರೇಷ್ಠತೆ, ಹಿಂದುತ್ವದ ಶ್ರೇಷ್ಠತೆಯನ್ನು ಮನಗಾಣಬೇಕು. ಹಿಂದುತ್ವದ ಬಗ್ಗೆ ಗೌರವ, ಭಕ್ತಿ ಬಂದಾಗ ನಮ್ಮನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ದೊ. ಕೇಶವಮೂರ್ತಿ ಹೇಳಿದರು.

Call us

Click Here

ಅವರು ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಭಾನುವಾರ ಜರಗಿದ ೫೦೫ ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು.

ಸ್ವಾತಂತ್ರ್ಯಾನಂತರದ ಹಿಂದುತ್ವವನ್ನು ಅಲುಗಾಡಿಸುವ ಪ್ರಯತ್ನ ನಡೆಯುತ್ತಿದೆ. ಗೋಮಾತೆ ಹಿಂದೂಗಳಿಗೆ ಶ್ರದ್ಧೆ. ಅಕ್ರಮ ಗೋಸಾಗಾಟ, ಗೋಹತ್ಯೆ ವಿರುದ್ಧ ಹಿಂದು ಜಾಗರಣ ವೇದಿಕೆ ಹೋರಾಟ ನಡೆಸಲಿದೆ. ಲವ್ ಜಿಹಾದ್ ಮೂಲಕ ಹಿಂದು ಯುವತಿಯರಿಗೆ ವಿವಿಧ ಆಮಿಷಗಳನ್ನು ತೋರಿಸಿ ಪುಸಲಾಯಿಸಿ ಬೇರೆ ಬೇರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಮತಾಂತರದ ಪಿಡುಗು ಹೆಚ್ಚಾಗುತ್ತಿದ್ದು, ಹಿಂದು ಧರ್ಮದ ಅನೇಕರನ್ನು ಈ ಬಲೆಗೆ ಬೀಳಿಸಲಾಗುತ್ತಿದೆ. ಮತಾಂತರ, ಲವ್ ಜಿಹಾದ್, ಅನ್ಯಾಯ, ಅಕ್ರಮಣದ ವಿರುದ್ಧ ಹಿಂದು ಜಾಗರಣ ವೇದಿಕೆ ಸದಾ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

ಕುಟುಂಬ ಯೋಜನೆ ಮೂಲಕ ಹಿಂದುಗಳ ಹೊಟ್ಟೆಗೆ ಕತ್ತರಿ ಹಾಕುತ್ತಿರುವ ಸರಕಾರ ಶಾದಿ ಭಾಗ್ಯದ ಮೂಲಕ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ದೇವಾಲಯದ ಹುಂಡಿಗಳ ಹಣವನ್ನು ಮಸೀದಿ, ಚರ್ಚ್‌ಗಳಿಗೆ ನೀಡುತ್ತಿದೆ. ಅಲ್ಪಸಂಖ್ಯಾತರ ಹಜ್ ಯಾತ್ರೆಗೆ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿರುವ ಸರಕಾರ ಹಿಂದುಗಳ ತೀರ್ಥ ಕ್ಷೇತ್ರದ ಯಾತ್ರೆಗೆ ಯಾವುದೇ ಅನುದಾನ ನೀಡುತ್ತಿಲ್ಲ. ದೇವಸ್ಥಾನದ ಹುಂಡಿಗಳ ಹಣ ದೇವಾಲಯದ ಕಾರ್ಯಗಳಿಗೆ ವಿನಿಯೋಗ ಆಗಬೇಕು ಎಂದು ಆಗ್ರಹಿಸಿದ ಅವರು ಮುಂದಿನ ದಿನಗಳಲ್ಲಿ ರಾಮ ಮಂದಿರ ನಿರ್ಮಾಣದ ಹೋರಾಟ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ಆಶೀರ್ವಚನ ನೀಡಿ ಮಾತನಾಡಿದ ಕಾಸರಗೋಡು ಕೊಂಡೆವೂರು ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಧರ್ಮ ಮತ್ತು ದೇಶವನ್ನು ಉಳಿಸಿಕೊಳ್ಳಲು ಹಿಂದು ಸಮಾಜಬಾಂಧವರು ಒಗ್ಗಟ್ಟಿನಿಂದ ಪ್ರಯತ್ನಿಸಬೇಕು. ಹಿಂದುತ್ವದ ಜಾಗೃತಿ ಆಗಬೇಕು. ಹಿಂದುತ್ವವನ್ನು ದುರ್ಬಲಗೊಳಿಸುವುದರ ಬಗ್ಗೆ ಎಚ್ಚರ ವಹಿಸಬೇಕು. ಸಂಸ್ಕೃತಿ, ಸಂಸ್ಕಾರಗಳನ್ನು ರಕ್ಷಣೆ ಮಾಡಬೇಕು. ಲವ್ ಜಿಹಾದ್‌ಗೆ ನಮ್ಮ ಯುವತಿಯರು ಬಲಿಯಾಗದಂತೆ ನೋಡಿಕೊಳ್ಳಬೇಕು. ದೇಶದಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಶಕ್ತಿ ತುಂಬುವ ವಾತಾವರಣ ನಿರ್ಮಾಣವಾಗಬೇಕು. ಭಗವಂತನ ಆರಾಧನೆ, ನಾಮಸ್ಮರಣೆ ಮಾಡಿದರೆ ಸಮಾಜದಲ್ಲಿ ಶಾಂತಿ ಸಮಾಧಾನ ನೆಲೆಸುತ್ತದೆ ಎಂದು ನುಡಿದರು.

Click here

Click here

Click here

Click Here

Call us

Call us

ಶಿವಮೊಗ್ಗದ ಉದ್ಯಮಿ ರವೀಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟ್ಯಾಕ್ಸಿಮೆನ್ ಅಸೋಸಿಯೇಶನ್‌ನ ಅಧ್ಯಕ್ಷ ಮಹಾಬಲ ಬಿ.ಪೂಜಾರಿ, ಗಂಗೊಳ್ಳಿ ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಸುಂದರ ಜಿ., ಉದ್ಯಮಿ ನಾಗರಾಜ ಪಂಡಿತ್, ಶ್ರೀ ಗುರುಜ್ಯೋತಿ ಸ್ಪೋಟ್ಸ್ ಕ್ಲಬ್‌ನ ಸ್ಥಾಪಕ ಸದಸ್ಯ ವಿಜಯ ಖಾರ್ವಿ, ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರವಿಂದ ಕೋಟೇಶ್ವರ, ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷ ರವೀಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಗಂಗೊಳ್ಳಿ ಹಿಂಜಾವೇ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್ ಸ್ವಾಗತಿಸಿದರು. ಹಿಂಜಾವೇ ಉಡುಪಿ ಜಿಲ್ಲಾ ಸಹಸಂಚಾಲಕ ಟಿ.ವಾಸುದೇವ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಶವಂತ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಸ್ವಾಮೀಜಿಯವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಗಂಗೊಳ್ಳಿಯ ಶ್ರೀ ರಾಮ ಮಂದಿರದ ಬಳಿಯಿಂದ ಪುರಮೆರವಣಿಯಲ್ಲಿ ಬರಮಾಡಿಕೊಳ್ಳಲಾಯಿತು.

Leave a Reply