ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಎರಡನೇ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಎರಡು ವರ್ಷಗಳ ಕಾಲ ಸತತ ಗೊಂಬೆಯಾಟ ತರಬೇತಿ ಪಡೆದುಕೊಂಡ ಅಕಾಡೆಮಿಯ ವಿದ್ಯಾರ್ಥಿಗಳಾದ ಸಂತೋಷ್ ಪ್ರಭು, ಸುದೀಪ್ ಸೇರುಗಾರ್ ಮತ್ತು ಅಭಿಷೇಕ್ ದೇವಾಡಿಗ ಇವರನ್ನು ಅರ್ಹತಾ ಪತ್ರ ನೀಡಿ ಸನ್ಮಾನಿಸಲಾಯಿತು. ನಂತರ ಅಕಾಡೆಮಿಯ ವಿದ್ಯಾರ್ಥಿಗಳಿಂದ ಗೊಂಬೆಯಾಟ ಪ್ರಾತ್ಯಕ್ಷಿಕೆ ನಡೆಯಿತು.










