ಗಂಗೊಳ್ಳಿಯಲ್ಲಿ ಸಂಭ್ರಮ: ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಧಿಕಾ ಪೈ ರಾಜ್ಯಕ್ಕೆ ಪ್ರಥಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಧಿಕಾ ಪೈ ಇತ್ತೀಚಿಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಸುದ್ದಿ ತಿಳಿಯುತ್ತಿದ್ದಂತೆಯೇ ಗಂಗೊಳ್ಳಿಯಲ್ಲಿ ಸಂಭ್ರಮ ಮನೆ ಮಾಡಿದೆ.

Call us

Click Here

ಊರಿನ ಜನರು ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ಅನೇಕ ಗಣ್ಯರು ಊರಿನ ಜನರು ತಂಡೋಪ ತಂಡವಾಗಿ ರಾಧಿಕಾ ಪೈ ಮನೆಗೆ ತೆರಳಿ ಶುಭ ಹಾರೈಸಿದ್ದಾರೆ. ಅನೇಕರು ದೂರವಾಣಿ ಕರೆ ಮಾಡಿ ಅಭಿನಂದಿಸಿ ಶುಭ ಹಾರೈಸಿದ್ದಾರೆ. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕಾಶೀನಾಥ ಪೈ, ಎಚ್.ಗಣೇಶ ಕಾಮತ್, ಎನ್.ಸದಾಶಿವ ನಾಯಕ್, ಕೆ.ರಾಮನಾಥ ನಾಯಕ್, ಶಾಲೆಯ ನಿವೃತ್ತ ಪ್ರಾಂಶುಪಾಲ ಆರ್.ಎನ್.ರೇವಣ್‌ಕರ್, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ಮೊದಲಾದವರು ಶುಭ ಹಾರೈಸಿದ್ದಾರೆ. ಗಂಗೊಳ್ಳಿ ಜಿಎಸ್‌ಬಿ ಸಮಾಜದ ಪರವಾಗಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವತಿಯಿಂದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ಎಂ.ಮುಕುಂದ ಪೈ ಅಭಿನಂದಿಸಿ ಶುಭ ಹಾರೈಸಿದರು.
ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ಎಂ.ಸುಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ಮಾಧವ, ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್ಸೈ ಸುಬ್ಬಣ್ಣ ಮೊದಲಾದವರು ರಾಧಿಕಾ ಪೈ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

Leave a Reply