ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ಆರ್.ಎನ್.ಶೆಟ್ಟಿ ಪದವಿಪೂರ್ವ ಕಾಲೇಜು ಶೇಕಡಾ 93.52 ರ ಫಲಿತಾಂಶ ಪಡೆದಿದ್ದು 142 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 251ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದ ಪ್ರಜ್ಞಾ ಎನ್. 590 ಅಂಕ ಗಳಿಸಿದ್ದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು ವಾಣಿಜ್ಯ ವಿಭಾಗದಲ್ಲಿ ನಮನ ಯು.ಸಿ. 586 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನಿಯಾಗಿದ್ದಾಳೆ.