ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ : ಭಟ್ಕಳ ಸಮೀಪ ಅನಂತವಾಡಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ದಾಖಲಾದ ಕುಂದಾಪುರ ಖಾಸಗಿ ಆಸ್ಪತ್ರೆಗೆ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಭೇಟಿ ನೀಡಿ, ಗಾಯಗಳುಗಳಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾರಣ ಅಪಘಾತಗಳು ಹೆಚ್ಚಾಗಿದೆ. ರಸ್ತೆ ಸೂಚನಾ ನಿಯಮ ಅನುಸರಿಸಲು ವಿಫಲರಾದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಈ ಬಗ್ಗೆ ಎಸ್ಪಿ, ಎಎಸ್ಪಿ ಮತ್ತು ರಸ್ತೆ ನಿರ್ಮಾಣದ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತೇನೆ. ಕೆಲಸ ಸರಿಯಾಗಿ ನಿರ್ವಹಿಸದಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
ಆದಾಯ ತೆರಿಗೆ ಇಲಾಖೆಯಿಂದ ಗಾಯಗೊಂಡ ವ್ಯಕ್ತಿಗಳಿಗೆ 5,೦೦೦ ರೂ. ಹಾಗೂ ಹೆಚ್ಚಿನ ಅನುದಾನದ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಗಮನಕ್ಕೆ ತರುತ್ತೇನೆ. ಗಾಯಗೊಂಡವರಿಗೆ ಸಹಾಯ ಮಾಡಲು ಪೊಲೀಸ್ ಇಲಾಖೆ ಸಿದ್ಧವಿದೆ ಎಂದರು. ಕಾರವಾರ ಎಸ್ಪಿ ವಿನಾಯಕ್ ಪಟೇಲ್, ಡಿವೈಎಸ್ಪಿ ಪ್ರವೀಣ್ ಕುಮಾರ್ ಮತ್ತು ಪೋಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಮಂಜಪ್ಪ ಇದ್ದರು.
- ಭಟ್ಕಳ: ಭೀಕರ ಅಪಘಾತದಲ್ಲಿ ಮದುಮಗಳು ಸೇರಿ 8 ಮಂದಿ ಸಾವು – http://kundapraa.com/?p=23110