ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಶೇಡಿಮನೆ ಗ್ರಾಮದ ಯುವತಿಗೆ ನಿರಂತರ ಕಿರುಕುಳ ನೀಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳ ವಿರುದ್ಧ ಪೋಸ್ಕೋ ಪ್ರಕರಣ ದಾಖಲಾಗಿದ್ದು, ಮೂವರ ಪೂಕಿ ಓರ್ವ ವಿನಯ ಶೆಟ್ಟಿ ಎಂಬುವವನನ್ನು ಬಂಧಿಸಿರುವ ಪೊಲೀಸರು, ಕುಂದಾಪುರ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಹೋದರನ ಜತೆ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಿನಯ್್ ಶೆಟ್ಟಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಿ ಕರೆತಂದಿದ್ದಾರೆ. ಆತನಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳ ಬಂಧನಕ್ಕಾಗಿ ನಮ್ಮ ವಿಶೇಷ ತಂಡ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.
ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾಳೆ.
► ಶೇಡಿಮನೆ: ಕಿರುಕುಳಕ್ಕೆ ಹೆದರಿ ಯುವತಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು – http://kundapraa.com/?p=23381