ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಹಿಂದೂ ಹಿತರಕ್ಷಣಾ ವೇದಿಕೆ ಬೈಂದೂರು ಇದರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಸಚಿವ ರಮಾನಾಥ ರೈ ವಿರುದ್ಧ ಬೈಂದೂರು ಪೇಟೆಯಲ್ಲಿ ಜೂನ್ 20ರ ಮಂಗಳವಾರ ಬೆಳಿಗ್ಗೆ 10ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಭಾಂದವರು ಭಾಗವಹಿಸುವಂತೆ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಬೈಂದೂರು ಪ್ರಖಂಡದ ಅಧ್ಯಕ್ಷ ಶ್ರೀಧರ ಬಿಜೂರು ತಿಳಿಸಿದ್ದಾರೆ.