ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಲೇಜು ಆರಂಭದ ದಿನಗಳಲ್ಲೇ ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸಿರುವುದು ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ನೀಡುವ ಜೊತೆಗೆ ಮುಂಬರುವ ಶೈಕ್ಷಣಿಕ ವರ್ಷದಲ್ಲಿಯೂ ಅತ್ಯುತ್ತಮ ಸಾಧನೆ ಮಾಡುವಂತೆ ಪ್ರೇರಣೆ ದೊರೆಯುತ್ತದೆ ಇಂತಹ ಕಾರ್ಯಕ್ರಮ ಸಂಘಟಿಸಿದ ಹಳೆ ವಿದ್ಯಾರ್ಥಿ ಸಂಘ ಅಭಿನಂದನಾರ್ಹ ಎಂದು ಮಣಿಪಾಲ ಆಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಆಡಳಿತಾಧಿಕಾರಿ ಡಾ. ಹೆಚ್. ಶಾಂತಾರಾಮ್ ಹೇಳಿದರು.
ಅವರು ಕುಂದಾಪುರ ಭಂಡಾರ್ಕಾಸ್ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಅತ್ಯುತ್ತಮ ಅಂಕ ಪಡೆದು ಕಾಲೇಜಿಗೆ ಸೇರ್ಪಡೆಗೊಂಡ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಕೀರ್ತಿ ಎಸ್., ಧನ್ಯಶ್ರೀ ಎಚ್.ಆರ್., ಶಣ್ಮುಖ ಕೆ.ಎಸ್., ರಕ್ಷಿತ್, ಪಲ್ಲವಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ಭಂಡಾರ್‌ಕಾರ‍್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ಕಾರ್ತೀಕೇಯ ಮಧ್ಯಸ್ಥ, ಪೂರ್ವಾಧ್ಯಕ್ಷ ರಾಜೀವ ಕೋಟ್ಯಾನ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಪ್ರೋ. ಅರುಣಾಚಲ ಮಯ್ಯ, ಕಾರ್ಯದರ್ಶಿ ರಂಜಿತ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ನಿರ್ದೇಶಕ ಪ್ರಶಾಂತ ಹೆಗೆಡೆ ಕಾರ್ಯಕ್ರಮ ನಿರೂಪಿಸಿದರು.