ಆಳ್ವಾಸ್ ಪ್ರಗತಿ 2017 ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್‌ನಲ್ಲಿ ಎರಡು ದಿನ ನಡೆಯುವ ಆಳ್ವಾಸ್ ಪ್ರಗತಿ 2017, ೯ನೇ ವರ್ಷದ ಬೃಹತ್ ಉದ್ಯೋಗ ಮೇಳಕ್ಕೆ ಶನಿವಾರ ಚಾಲನೆ ನೀಡಲಾಯಿತು.

Call us

Click Here

ರಾಜ್ಯ ಕ್ರೀಡಾ ಹಾಗೂ ಯುವಜನ ಸೇವಾ ಖಾತೆಯ ಸಚಿವ ಪ್ರಮೋದ್ ಮದ್ವರಾಜ್ ಉದ್ಯೋಗ ಮೇಳವನ್ನು ಉದ್ಘಾಟಿಸಿ, ಶೈಕ್ಷಣಿಕ ಗುಣಮಟ್ಟದಲ್ಲಿ ಉಡುಪಿ, ದ.ಕ ಜಿಲ್ಲೆ ಅಗ್ರಪಂಕ್ತಿಯಲ್ಲಿದ್ದು, ಅಗಾಧವಾದ ಮಾನವ ಸಂಪನ್ಮೂಲವನ್ನು ಸೃಷ್ಠಿಸುವ ಕೇಂದ್ರವಾಗಿಯೂ ಬೆಳೆದಿದೆ. ವಿವಿಧ ಕಂಪೆನಿಗಳು ಮಾನವಸಂಪನ್ಮೂಲಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದು, ಗುಣಮಟ್ಟ ಸಹಿತ ಉತ್ತಮ ಸಾಮರ್ಥ್ಯದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಗಮನಹರಿಸುತ್ತಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವಜನರ ಕೌಶಲ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಯುವಕರಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರವು ೬ ಕೋಟಿ ಗೂ ಅಧಿಕ ಅನುದಾನವನ್ನು ವಿನಿಯೋಗಿಸುತ್ತಿದೆ. ಯುವಕರು ಉದ್ಯೋಗಾಂಕ್ಷಿಗಳಾಗುವುದು ಮಾತ್ರವಲ್ಲ. ಹೊಸ ಉದ್ದಿಮೆಗಳನ್ನು ಸ್ಥಾಪಿಸಿ, ಉದ್ಯೋಗ ಸೃಷ್ಟಿಸುವ ಕೆಲಸಕ್ಕೂ ಮುಂದಾಗಬೇಕು. ಸ್ವಸಾಮರ್ಥ್ಯದ ಬಗ್ಗೆ ನಂಬಿಕೆಯಿರಿಸಿ, ಅದನ್ನು ಅನುಷ್ಠಾನಕ್ಕೆ ತರಬೇಕು ಎಂದರು.

ಅಬುದಾಬಿಯಲ್ಲಿರುವ ಬಿಆರ್‌ಎಸ್ ವೆಂಚರ‍್ಸ್‌ನ ಸಿಇಒ ಬಿನಯ್ ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಭಾರತವು ಇಂದು ದೊಟ್ಟಮಟ್ಟದಲ್ಲಿ ಸ್ಟಾರ್ಟ್ ಅಪ್ ದೇಶವಾಗಿ ಬೆಳೆಯುತ್ತಿದ್ದು, ಯುವಜನರಿಗೆ ಸಾಕಷ್ಟು ಉದ್ಯೋಗಗಳು ಕೂಡ ಸೃಷ್ಟಿಯಾಗುತ್ತಿದೆ ಎಂದರು.

ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಟ್ರಸ್ಟಿ ಜಯಶ್ರೀ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು. ದೀಪಾ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.

????????????????????????????????????

Leave a Reply