ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಶ್ವಿ ಚೆಸ್ ಸ್ಕೂಲ್ ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಹಿಪ್ರಾ ಶಾಲೆ ಕಾಳವಾರದ ನಿಹಾಲ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಕಾರ್ಕಡ ಸಹಿಪ್ರಾ ಶಾಲೆ ಕಾರ್ತಿಕ್ ದ್ವಿತೀಯ ಸ್ಥಾನವನ್ನೂ, ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಅನಿರುದ್ಧ ತೃತೀಯ ಸ್ಥಾನವನ್ನೂ ಹಾಗೂ ಕುಂದಾಪುರ ಬೋರ್ಡ್ ಹೈಸ್ಕೂಲ್ ವಿದ್ಯಾರ್ಥಿ ಶ್ರೇಯಸ್ ನಾಲ್ಕನೇ ಸ್ಥಾನ ಪಡೆದಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳು ಕಶ್ಚಿ ಚೆಸ್ ಸ್ಕೂಲ್‌ನಲ್ಲಿ ತರಬೇತಿ ಪಡೆದಿದ್ದಾರೆ. ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟೇಶ ಆಚಾರ್ಯ ಕೋಟೇಶ್ವರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಸ್ರೂರು ಶಾರದಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೂರಜ್ ಶೆಟ್ಟಿ, ಕಶ್ವಿ ಸ್ಕೂಲ್ ತರಬೇತುದಾರ ಗುರುರಾಜ್ ಶೆಟ್ಟಿ ಉಪಸ್ಥಿತರಿದ್ದರು. ಸಚಿನ್ ಶೆಟ್ಟಿ, ಪ್ರದೀಪ್ ರಾವ್ ಹಾಗೂ ದೀಪಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.