ಪದವಿ ತರಗತಿ ಸಮಯ ಬದಲಾವಣೆ: ಕೋಟೇಶ್ವರ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿ ತರಗತಿಗಳನ್ನು ಬೆಳಿಗ್ಗೆ ಎಂಟು ಗಂಟೆಯಿಂದಲೇ ಆರಂಭಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗಲಿದ್ದು, ಕೂಡಲೇ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕೋಟೇಶ್ವರ ಘಟಕದಿಂದ ಕುಂದಾಪುರ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Call us

Click Here

ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಮಯದ ಬದಲಾವಣೆಯಿಂದ ತೊಂದೆರೆಯಾಗಲಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅಷ್ಟು ಬೇಗ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಬೆಳಗ್ಗಿನ ತರಗತಿಗಳು ತಪ್ಪಿಹೋಗುವ ಸಂದರ್ಭವೇ ಹೆಚ್ಚು. ಹಾಗಾಗಿ ಕೂಡಲೇ ಸಮಯವನ್ನು ಬದಲಾವಣೆ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲಮಾಡಿಕೊಡಬೇಕು ಎಂದು ಆಗ್ರಹಿಸಿದರು. ಕುಂದಾಪುರ ತಹಶೀಲ್ದಾರ್ ಅವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಎಬಿವಿಪಿ ಉಡುಪಿ ಸಂಘಟನಾ ಕಾರ್ಯದರ್ಶಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

Leave a Reply