ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಹುಂಚನಿ ಕೃಷ್ಣಪ್ಪ ಶೆಟ್ಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ರೋಟರಿ ಕ್ಲಬ್ ಇದರ 2017-18ನೇ ಸಾಲಿನ ಅಧ್ಯಕ್ಷರಾಗಿ ಹುಂಚನಿ ಕೃಷ್ಣಪ್ಪ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಯು. ಪ್ರವೀಣ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಜುಲೈ 19ರಂದು ರೋಟರಿ ಭವನದಲ್ಲಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ ನಡೆಯಲಿದ್ದು, ರೋಟರಿ ಜಿಲ್ಲಾ ಮಾಜಿ ಗವರ್ನರ್ ಎಚ್. ಎಲ್. ರವಿ ಪದಗ್ರಹಣ ಅಧಿಕಾರಿಯಾಗಿ ಪ್ರಮಾಣವಚನ ಬೋಧಿಸಲಿದ್ದಾರೆ. ರೋಟರಿ ಸಹಾಯಕ ಗವರ್ನರ್ ಕೃಷ್ಣ ಕಾಂಚನ್, ವಲಯ ಪ್ರತಿನಿಧಿ ಜಯಪ್ರಕಾಶ್ ಶೆಟ್ಟಿ ವೈ. ಉಪಸ್ಥಿತರಿರುವರು.

Call us

Click Here

ವೃತ್ತಿಯಲ್ಲಿ ಶಿಕ್ಷಕರಾಗಿ ಸುದೀರ್ಘ ಅವಧಿಯ ಸೇವೆಸಲ್ಲಿಸಿ ನಿವೃತ್ತರಾದ ಕೃಷ್ಣಪ್ಪ ಶೆಟ್ಟಿ (ಅಪ್ಪು ಮಾಸ್ಟರ್),  ಅವಕಾಶ ಹಾಗೂ ಸಾಧ್ಯತೆಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದೇ ನಿಜವಾದ ಜೀವನ ಎಂಬ ನೆಲೆಯಲ್ಲಿ ಹಲವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬೈಂದೂರು ರೋಟರಿಯ ಈ ವರ್ಷದ ಅಧ್ಯಕ್ಷರಾಗಿ ಹಲವಾರು ಜನಪರ ಯೋಜನೆಗಳನ್ನು ಈಗಾಗಲೇ ಹಾಕಿಕೊಂಡಿದ್ದಾರೆ.

Leave a Reply