ಭಂಡಾರ್ಕಾರ್ಸ್ ಕಾಲೇಜು: ಘನತ್ಯಾಜ್ಯ ನಿರ್ವಹಣೆ ಕುರಿತ ಮಾಹಿತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ಮತ್ತು ಘನತ್ಯಾಜ್ಯ ನಿರ್ವಹಣೆ ಕುರಿತ ಮಾಹಿತಿ ಕಾರ್ಯಕ್ರಮ ನಡೆಯಿತು.

Call us

Click Here

ಕನ್ನಡ ಪ್ರಾಧ್ಯಾಪಕರಾದ ಕಾಳಾವರ ಉದಯ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಒಬ್ಬ ವ್ಯಕ್ತಿಯ ಸರ್ವೋತೋಮುಖ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆಯು ಸಹಕಾರಿಯಾಗಿದೆ. ಶಿಸ್ತು, ಸಂಘಟನಾ ಶಕ್ತಿ, ಸಂಪೂರ್ಣ ಮಾಡುವಂತಹ ಶಕ್ತಿ ರಾಷ್ಟ್ರೀಯ ಸೇವಾ ಯೋಜನೆಗೆ ಇದೆ. ನಾಯಕತ್ವ, ಸಂಹ್ಗಟನೆ, ಭಾವೈಕ್ಯತೆಯನ್ನು ಅಳವಿಡಿಸಿಕೊಳ್ಳಿ ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ.ಆರ್.ಸಂಕೇತ್ ಘನತ್ಯಾಜ್ಯ ನಿರ್ವಹಣೆ ಕುರಿತು, ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ವಿದ್ಯಾರ್ಥಿಗಳಾದ ಉಮೇಶ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ತಿಕ್ ಸ್ವಾಗತಿಸಿದರು. ಅವಿನಾಶ್ ಶೆಣೈ ವಂದಿಸಿದರು.

Leave a Reply