ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ತರಗತಿಯಿಲ್ಲದೇ ಸ್ಥಿತಿ ನಿರ್ಮಾಣವಾಗಿದ್ದು ಇಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ವಿದ್ಯಾರ್ಥಿ ಪೋಷಕರೊಂದಿಗೆ ಮಾತನಾಡಿದ ಅವರು ಶಾಲೆಯ ನವೀಕೃತ ಕಟ್ಟಡವನ್ನು ನಿರ್ಮಿಸಲು ಇಲಾಖೆಯಿಂದ 13 ಲಕ್ಷ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಮಂಜೂರು ಮಾಡಲಾಗುವುದು. ಹೊಸ ಕಟ್ಟಡ ನಿರ್ಮಾಣವಾಗುವ ತನಕ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿ ಅಲ್ಲಿಯೇ ತರಗತಿ ನಡೆಸಲು ಸೂಚಿಸಲಾಗಿದ್ದು ನಾಲ್ಕೈದು ದಿನದಲ್ಲಿ ತಾತ್ಕಾಲಿಕ ಶೆಡ್ ನಿರ್ಮಾಣಗೊಳ್ಳಲಿದೆ ಎಂದರು.
ಶಿಥಿಲಗೊಂಡಿರುವ ಕಟ್ಟಡವನ್ನು ಕೂಡಲೇ ನೆಲಸಮಗೊಳಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಡಿಡಿಪಿಐ ಅವರಿಗೆ ಸೂಚಿಸಿರುವ ಶಾಸಕರು, ಹೊಸ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಕ್ರಮಕೈಗೊಳ್ಳುವಂತೆಯೂ ಸೂಚಿಸಿದರು. ತಾತ್ಕಾಲಿಕ ಶೆಡ್ ನಿರ್ಮಾಣಗೊಳ್ಳುವ ತನಕ ವಿದ್ಯಾರ್ಥಿಗಳ ತರಗತಿಗೆ ಅಡಚಣೆಯಾಗಲಿದ್ದು, ಶೆಡ್ ನಿರ್ಮಾಣಗೊಂಡ ಬಳಿಕ ವಿಶೇಷ ತರಗತಿಗಳನ್ನು ತೆಗೆದುಕೊಂಡು ಸರಿದೂಗಿಸುವಂತೆ ಮುಖ್ಯೋಪಧ್ಯಾಯರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಕಾಲ್ತೋಡು ಗ್ರಾ.ಪಂ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಸವೀಣ ಶೆಟ್ಟಿ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು.
► ಕಪ್ಪಾಡಿ ಶಾಲೆ ಕಟ್ಟಡ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿಗಳು ಅತಂತ್ರ – http://kundapraa.com/?p=24261
► ಇಲ್ಲಗಳ ನಡುವೆಯೇ ಇದೆ ಕಪ್ಪಾಡಿ ಸರ್ಕಾರಿ ಶಾಲೆ – http://kundapraa.com/?p=3545