ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆ ಕೊಲ್ಲೂರು ಹಾಗೂ ಸ್ವತಂತ್ರ ಪದವಿ ಪೂರ್ವ ಕಾಲೇಜು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸುಪರ್ಣಾ ಸೇವಾ ಟ್ರಸ್ಟ್ ವತಿಯಿಂದ ಮಾಸ್ಕಿಟೊ ಕಿಟ್ ವಿತರಿಸಲಾಯಿತು.
ಸುಪರ್ಣಾ ಸೇವಾ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟಿ ಕೊಲ್ಲೂರು ರಮೇಶ್ ಗಾಣಿಗ ಕೊಡುಗೆಯಾಗಿ ನೀಡಿದ ಕಿಟ್‌ನ್ನು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಹಣಾಧಿಕಾರಿ ಜನಾರ್ಧನ ಅವರು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.
ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಗ್ರೀಷ್ಮಾ ಗಿರಿಧರ ಭಿಡೆ, ಕೊಲ್ಲೂರಿನ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ ಹಾಗೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅರುಣ್ ಪ್ರಕಾಶ್ ಶೆಟ್ಟಿ, ನಾಗರಾಜ್ ಅಡಿಗ, ಪ್ರೌಢ ಶಾಲೆಯ ಹಿರಿಯ ಶಿಕ್ಷಕ ಕೃಷ್ಣ ಮತ್ತು ಸುಪರ್ಣಾ ಸೇವಾ ಟ್ರಸ್ಟ್ ಸದಸ್ಯ ರಂಗ ನಾಯ್ಕ್, ವಿನಾಯಕ ಆಚಾರ್ಯ ಮೊದಲಾದವರು ಉಪಸ್ಥಿರಿದ್ದರು.