ಎಲೆ ಮರೆಯ ಕಾಯಿ: ಸಮಾಜ ಸೇವಕ ಕುಷ್ಟ ದೇವಾಡಿಗ ಅವರಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಯಾವುದೇ ಫಲಾಪೇಕ್ಷೆ ಇಲ್ಲದೆ ಎಲೆ ಮರೆಯ ಕಾಯಿಯಂತೆ ಕಳೆದ ಸುಮಾರು ೨೫ ವರ್ಷಗಳಿಂದ ಗಂಗೊಳ್ಳಿಯ ಮಲ್ಯರಮಠ ಶ್ರೀ ರಥೋತ್ಸವದ ಸಂದರ್ಭ ರಥ ಕಟ್ಟುವ ಕಾಯಕದಲ್ಲಿ ತನ್ನನ್ನು ನಿಸ್ವಾರ್ಥವಾಗಿ ತೊಡಗಿಸಿಕೊಂಡು ಶ್ರೀದೇವರ ಸೇವೆ ಸಲ್ಲಿಸುತ್ತಿರುವ ಗಂಗೊಳ್ಳಿಯ ಕುಷ್ಟ ದೇವಾಡಿಗ ಎಲ್ಲರಿಗೂ ಮಾದರಿಯಾಗಿದ್ದಾರೆ. ಯುವಪೀಳಿಗೆ ಇವರ ಮಾರ್ಗದರ್ಶನದಲ್ಲಿ ಮುನ್ನಡೆಯುವ ಪ್ರಯತ್ನ ನಡೆಸಬೇಕು ಎಂದು ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ.ವಿಠಲ ಭಾಸ್ಕರ ಶೆಣೈ ಹೇಳಿದರು.

Call us

Click Here

ಅವರು ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಂಘದ ’ಎಲೆ ಮರೆಯ ಕಾಯಿ’ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿಯ ಸಮಾಜ ಸೇವಕ ಕುಷ್ಟ ದೇವಾಡಿಗ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಿ ಮಾತನಾಡಿದರು.

ಸಂಘದ ಮಾಜಿ ಅಧ್ಯಕ್ಷರಾದ ಕೃಷ್ಣಾನಂದ ಮಡಿವಾಳ, ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್, ರಾಮನಾಥ ಚಿತ್ತಾಲ್, ಬಿ.ರಾಘವೇಂದ್ರ ಪೈ ಮತ್ತು ಕೆ.ರಾಮನಾಥ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Leave a Reply