ಮನಸ್ಸನ್ನು ಪುಳಕಿತಗೊಳಿಸುವ ಶಕ್ತಿ ಸಂಗೀತಕ್ಕಿದೆ: ಡಾ. ಕಾಶೀನಾಥ ಪೈ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮನುಷ್ಯನ ಜೀವನದಲ್ಲಿ ಸಂಗೀತ ಅವಶ್ಯವಾಗಿದೆ. ಮನಸ್ಸಿಗೆ ಉಲ್ಲಾಸ ನೀಡುವ ಮನಸ್ಸನ್ನು ಪುಳಕಿತಗೊಳಿಸಿ ಜೀವನವನ್ನು ಉತ್ತಮಗೊಳಿಸುವ ಶಕ್ತಿ ಸಂಗೀತಕ್ಕಿದೆ. ಹೀಗಾಗಿ ಸಂಗೀತವನ್ನು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂಗೀತದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಹೇಳಿದರು.

Call us

Click Here

ಗಂಗೊಳ್ಳಿ ಸಮುದಾಯ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಿಶೇಷ ಘಟಕ ಯೋಜನೆಯಡಿ ಪ್ರಾಯೋಜಿತ ಆಕಾಶವಾಣಿ ಕಲಾವಿದ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಮತ್ತು ಬಳಗದವರ ಸುಗಮ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತರ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಹಳಷ್ಟು ಶ್ರಮ ಪಡಬೇಕಿದೆ. ಆದರೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಈ ಅವಕಾಶಗಳನ್ನು ಬಳಸಿಕೊಂಡು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಮುಂದಾಗಬೇಕು ಎಂದು ಅವರು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಭಾಸ್ಕರ ಖಾರ್ವಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಭಾರ ಉಪಪ್ರಾಂಶುಪಾಲೆ ಶ್ರೀಲತಾ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಸ್ವಾಗತಿಸಿದರು. ಆಕಾಶವಾಣಿ ಕಲಾವಿದ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ವಂದಿಸಿದರು.

 

Click here

Click here

Click here

Click Here

Call us

Call us

Leave a Reply