ಸರಸ್ವತಿ ವಿದ್ಯಾಲಯದಲ್ಲಿ ‘ದೃಷ್ಟಿ’ ಬಿಡುಗಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಮನುಷ್ಯನಲ್ಲಿನ ಅನುಭವದ ಹೂರಣವನ್ನು ಹೊರತರುವಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆಗಳು ಬಹಳ ಸಹಕಾರಿ. ವ್ಯವಹಾರಿಕ ಬದುಕಿನಲ್ಲಿ ಉದ್ಯಮಶೀಲತೆಯ ಜೊತೆಗೆ ಕ್ರಿಯಾಶೀಲತೆ ಮತ್ತು ಸೃಜನ ಶೀಲತೆಯನ್ನು ಬೆಳೆಸಿಕೊಳ್ಳಲು ಅವು ಸಹಾಯ ಮಾಡುತ್ತವೆ ಎಮದು ಕೋಟೇಶ್ವರ ವರದರಾಜ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ನಾಯಕ್ ಅಭಿಪ್ರಾಯಪಟ್ಟರು.

Call us

Click Here

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಸೋಮವಾರ ನಡೆದ ಸಮಾರಂಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ದೃಷ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮುಖೇನ ತಮ್ಮ ಜ್ಞಾನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಜಿ.ಎಸ್.ವಿ.ಎಸ್ ಅಸೋಷಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ , ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಆಂಗ್ಲ ಬಾಷಾ ಉಪನ್ಯಾಸಕ ಥಾಮಸ್ ಪಿ ಎ ಸ್ವಾಗತಿಸಿದರು. ಸಂಪಾದಕ ಬಳಗದ ನಾರಾಯಣ ನಾಯ್ಕ್ , ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ‍್ಯಕ್ರಮ ನಿರ್ವಹಿಸಿದರು. ಆಂಗ್ಲ ಬಾಷಾ ಉಪನ್ಯಾಸಕಿ ಶಾಲೆಟ್ ಲೋಬೋ ವಂದಿಸಿದರು.

Leave a Reply