ಯುವ ಶಕ್ತಿಯಿಂದ ಮಾತ್ರ ರಾಷ್ಟ್ರ ಉನ್ನತಿ: ನಂಜೇನಾಯ್ಕ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿ ಜೀವನ ನಮ್ಮ ಜೀವನದ ಸುವರ್ಣಯುಗ. ವಿದ್ಯಾರ್ಥಿ ಜೀವನವನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನ ಯುವಜನರಿಂದ ನಡೆಯಬೇಕು. ದೇಶದಲ್ಲಿ ಯುವಶಕ್ತಿ ಬೆಳೆದರೆ ಮಾತ್ರ ನಮ್ಮ ರಾಷ್ಟ್ರ ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಲು ಮುಂದಾಗಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಪ್ರೊಬೇಷನರಿ ಸಬ್ ಇನ್ಸ್‌ಪೆಕ್ಟರ್ ನಂಜೇನಾಯ್ಕ್ ಹೇಳಿದರು.

Call us

Click Here

ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ೨೦೧೭-೧೮ನೇ ಸಾಲಿನ ಚಟುವಟಿಕೆಗಳಿಗೆ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದರು.

ಎನ್ನೆಸ್ಸೆಸ್‌ನಿಂದ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ ಬೆಳೆಯುತ್ತದೆ. ಮುಖ್ಯವಾಗಿ ರಾಷ್ಟ್ರೀಯ ಭಾವನೆ, ರಾಷ್ಟ್ರೀಯ ಐಕ್ಯತೆಯನ್ನು ನಮ್ಮಲ್ಲಿ ಬೆಳೆಸುವಲ್ಲಿ ಎನ್ನೆಸ್ಸೆಸ್ ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್ ಅಸೋಶಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಶುಭ ಹಾರೈಸಿದರು. ವಿದ್ಯಾರ್ಥಿಗಳಾದ ಸುಶ್ಮಿತಾ ಮತ್ತು ಗೌರೀಶ್ ಉಪಸ್ಥಿತರಿದ್ದರು.

ಉಪನ್ಯಾಸಕ ರಾಘವೇಂದ್ರ ಭಟ್ ಸ್ವಾಗತಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ನಾರಾಯಣ ಇ.ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ಸುಜಯೀಂದ್ರ ಹಂದೆ ಸಹಕರಿಸಿದರು. ಉಪನ್ಯಾಸಕ ಭಾಸ್ಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಸುಗುಣ ಆರ್. ವಂದಿಸಿದರು.

Leave a Reply