ತ್ರಾಸಿಯಲ್ಲಿ ಅಖಂಡ ಭಾರತ ಸಂಕಲ್ಪ ದಿನ, ಪಂಜಿನ ಮೆರವಣಿಗೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಶ್ವ ಹಿಂದೂ ಪರಿಷತ್ ಬಜರಂಗದಳ ತ್ರಾಸಿ ಘಟಕದಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ಪಂಜಿನ ಮೆರವಣಿಗೆ ನಡೆಯಿತು.

Call us

Click Here

ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಜರುಗಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ ತ್ರಾಸಿ ಘಟಕದ ಉದ್ಘಾಟನಾ ಸಮಾರಂಭದ ಹಾಗೂ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಧ್ಯಕ್ಷತೆಯನ್ನು ಅತ್ತಾವರ ಕೆಎಂಸಿಯ ಎಂ. ಸಿ ಅಪ್ಪಣ್ಣ ವಹಿಸಿದ್ದರು. ಬಜರಂಗದಳದ ಪ್ರಾಂತ ಸಹ ಸಂಯೋಜಕ ರಘುಜೀ ಸಕಲೇಶಪುರ ದಿಕ್ಸೂಚಿ ಭಾಷಣ ಮಾಡಿದರು. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವಿಲಾಸ್ ನಾಯಕ್, ಬಜರಂಗದಳ ಮಂಗಳೂರು ವಿಭಾಗ ಸಹ ಸಂಚಾಲಕ ಸುನಿಲ್ ಕೆ.ಆರ್, ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್, ಸಹ ಸಂಚಾಲಕ ಗಿರೀಶ್ ಕುಂದಾಪುರ, ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡದ ಅಧ್ಯಕ್ಷ ಶ್ರೀಧರ ಬಿಜೂರು, ಸಂಚಾಲಕ ನಿತ್ಯಾನಂದ ಉಪ್ಪುಂದ ಮೊದಲಾದವರು ಉಪಸ್ಥಿತರಿದ್ದರು.

ತ್ರಾಸಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಎಂ. ಆರ್. ಕೇಶವ ತ್ರಾಸಿ ಸ್ವಾಗತಿಸಿ, ಸಂಚಾಲಕ ಸುನಿಲ್ ವಂದಿಸಿದರು. ತ್ರಾಸಿ ಅಮ್ಮಚಿಕ್ಕು ದೇವಸ್ಥಾನದಿಂದ ಅಣ್ಣಪ್ಪಯ್ಯ ಸಭಾಭವನದ ತನಕ ಪಂಜಿನ ಮೆರವಣಿಗೆ ಜರುಗಿತು.

Leave a Reply