ಸೆಳ್ಕೋಡು ಸರಕಾರಿ ಶಾಲೆಗೆ ಸುವರ್ಣ ಸಂಭ್ರಮ: ಲಾಂಛನ ಬಿಡುಗಡೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಜಡ್ಕಲ್: ಗ್ರಾಪಂ ವ್ಯಾಪ್ತಿಯ ಸೆಳ್ಕೋಡು ಸಹಿಪ್ರಾ ಶಾಲೆಯಲ್ಲಿ ಭಾನುವಾರ ಹಳೆವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಸುವರ್ಣ ಸಂಭ್ರಮದ ಲಾಂಛನ ಬಿಡುಗಡೆ ಸಮಾರಂಭ ನಡೆಯಿತು.

Call us

Click Here

ಶಾಸಕ ಕೆ. ಗೋಪಾಲ ಪೂಜಾರಿ ಹಳೆವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ಶಾಲೆಯ ಹಳೆವಿದ್ಯಾರ್ಥಿ ಉದ್ಯಮಿ ಸದಾಶಿವ ನಾಯ್ಕ್ ಲಾಂಛನ ಬಿಡುಗಡೆಗೊಳಿಸಿದರು. ಈ ಸಂದರ್ಭ ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಸಂಘದ ವತಿಯಿಂದ ಶಾಲೆಗೆ ಕಂಪ್ಯೂಟರ್ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಮಹಾಬಲ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಮಂಗಳೂರು ಎಕ್ಷಿಸ್ ಬ್ಯಾಂಕಿನ ಸಹಾಯಕ ಪ್ರಬಂಧಕ ಲಿಜೋ ಮ್ಯಾಥ್ಯೂ, ಸುವರ್ಣ ವಿದ್ಯಾನಿಧಿ ಅಧ್ಯಕ್ಷ ಸುರೇಂದ್ರ ನಾಯ್ಕ್ ನೇತ್ರಾಡಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ನಾಯ್ಕ್, ಉಪಾಧ್ಯಕ್ಷ ರಘುರಾಮ ಪೂಜಾರಿ, ಬಿಆರ್‌ಪಿ ನಾಗರಾಜ ಪುತ್ರನ್ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಭಾಸ್ಕರ್ ನಾಯ್ಕ್ ಸ್ವಾಗತಿಸಿ ಪ್ರಾಸ್ತಾವಿಸಿದರು. ಮೇರಿ ಜೋಸೆಫ್ ವಂದಿಸಿದರು. ಸತೀಶ್ ದೇವಾಡಿಗ ನಿರೂಪಿಸಿದರು. ಶಿಕ್ಷಕಿಯರಾದ ಶೈಲಜಾ, ಸುನಿತಾ, ಜಾನಕಿ ಸಹಕರಿಸಿದರು.

Leave a Reply