ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ವತಿಯಿಂದ ತ್ರಾಸಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಖಾರ್ವಿ ಸಭಾ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ೧೦ ಲಕ್ಷ ರೂ.ಗಳ ಚೆಕ್‌ನ್ನು ಹಸ್ತಾಂತರಿಸಲಾಯಿತು.
ಶುಕ್ರವಾರ ತ್ರಾಸಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುಮಾರು ೮ ಕೋಟಿ ರೂ. ವೆಚ್ಚದ ಕೊಂಕಣಿ ಖಾರ್ವಿ ಸಭಾ ಭವನವನ್ನು ವೀಕ್ಷಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ಕಛೇರಿಯ ನಿರ್ದೇಶಕ ಮಹಾವೀರ ಆಜ್ರಿ ಅವರು ಬಳಿಕ ನಡೆದ ಸರಳ ಸಮಾರಂಭದಲ್ಲಿ ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ಅಧ್ಯಕ್ಷ ಕೆ.ಬಿ.ಖಾರ್ವಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ೧೦ ಲಕ್ಷ ರೂ.ಗಳ ಚೆಕ್‌ನ್ನು ಹಸ್ತಾಂತರಿಸಿದರು.
ಇದೇ ಸಂದರ್ಭ ನಿರ್ದೇಶಕ ಮಹಾವೀರ ಆಜ್ರಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ., ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ., ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣ ಪೂಜಾರಿ, ಜನಜಾಗೃತಿ ವೇದಿಕೆ ಸದಸ್ಯ ಸುಧಾಕರ ಆಚಾರ್ಯ, ತ್ರಾಸಿ ವಲಯ ಮೇಲ್ವಿಚಾರಕ ವೆಂಕಟೇಶ, ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾದ ಹಿರಿಯ ಉಪಾಧ್ಯಕ್ಷ ಮೋಹನ ಬಾನವಾಳಿಕರ್ ಗೋವಾ, ಕೋಶಾಧಿಕಾರಿ ಜಿ.ಪುರುಷೋತ್ತಮ ಆರ್ಕಾಟಿ, ವಿವಿಧ ಘಟಕಗಳ ಸದಸ್ಯರು, ಸಂಘದ ಪದಾಧಿಕಾರಿಗಳು, ಯೋಜನೆಯ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಉಮಾನಾಥ ಗಂಗೊಳ್ಳಿ ಸ್ವಾಗತಿಸಿದರು. ಸಂಘದ ಅಧ್ಯಕ್ಷ ಕೆ.ಬಿ.ಖಾರ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಉಪಾಧ್ಯಕ್ಷ ಸೂರ್ಯಕಾಂತ ಸಾರಂಗ ವಂದಿಸಿದರು.