ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಯಾವುದೇ ಫಲಾಪೇಕ್ಷೆ ಮತ್ತು ಪ್ರಚಾರವಿಲ್ಲದೆ ಸಮಾಜದಲ್ಲಿ ಎಲೆಮರೆಯ ಕಾಯಿಯಂತೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದ್ದು, ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಇನ್ನುಳಿದ ಸಾಧಕರಿಗೆ ಇದರಿಂದ ಪ್ರೋತ್ಸಾಹ ದೊರೆಯಲಿದೆ. ಸಮಾಜದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಸಾಧಕರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಮಾಡುತ್ತಿದೆ ಎಂದು ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಮಾಜಿ ಕಾರ್ಯದರ್ಶಿ ಕೆ.ರಾಮನಾಥ ನಾಯಕ್ ಹೇಳಿದರು.
ಅವರು ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಂಜೆ ಜರಗಿದ ಎಲೆಮರೆಯ ಕಾಯಿ ಕಾರ್ಯದಲ್ಲಿ ಮಾತನಾಡಿದರು. ಇದೇ ಸಂದರ್ಭ ಉರಗ ತಜ್ಞ ಗುರುರಾಜ್ ಗಂಗೊಳ್ಳಿ ಅವರನ್ನು ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಜಿ.ವಿಠಲ ಭಾಸ್ಕರ ಶೆಣೈ ಅವರು ಸನ್ಮಾನಿಸಿ ಗೌರವಿಸಿದರು. ಸಂಘದ ಮಾಜಿ ಅಧ್ಯಕ್ಷರಾದ ಜಿ.ಕೃಷ್ಣಾನಂದ ಮಡಿವಾಳ, ಬಿ.ರಾಘವೇಂದ್ರ ಪೈ ಹಾಗೂ ಕಾರ್ಯದರ್ಶಿ ಗಣೇಶ ಕಿಣಿ ಉಪಸ್ಥಿತರಿದ್ದರು.