ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರಎಜ್ಯುಕೇಶನ್ ಸೊಸೈಟಿ ಪ್ರವರ್ತಿತ, ಡಾ. ಬಿ. ಬಿ. ಹೆಗ್ಡೆ ಪ್ರಥಮದರ್ಜೆಕಾಲೇಜಿನ ರಕ್ಷಕ-ಶಿಕ್ಷಕ ಸಂಘಕ್ಕೆ ಪ್ರಸಕ್ತ ಶೈಕ್ಷಣಿಕ ವರ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನುಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮಚಂದ್ರಶೇಖರ್‌ರವರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು.
ಗೌರವಾಧ್ಯಕ್ಷರಾಗಿ ಕಾಲೇಜಿನ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು, ಅಧ್ಯಕ್ಷರಾಗಿ ವಿಷ್ಣುಮೂರ್ತಿ ಉಡುಪ ಉಪಾಧ್ಯಕ್ಷರಾಗಿ ಪ್ರೊ. ದೋಮ ಚಂದ್ರಶೇಖರ್, ಕಾರ್ಯದರ್ಶಿಗಳಾಗಿ ಮಮತಾ ಎಸ್. ರಾವ್., ಜೊತೆ ಕಾರ್ಯದರ್ಶಿಗಳಾಗಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಾಕರ್ ಪಾರಂಪಳ್ಳಿ, ಖಜಾಂಚಿಯಾಗಿ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ರಕ್ಷಾ ಎಸ್. ಶೆಟ್ಟಿ ಆಯ್ಕೆಯಾದರು. ಪೋಷಕರು, ಬೋಧಕ-ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ರಕ್ಷಾಎಸ್. ಶೆಟ್ಟಿ ವಂದಿಸಿದರು, ಸುಧಾಕರ್ ಪಾರಂಪಳ್ಳಿಯವರು ಕಾರ್ಯಕ್ರಮ ನಿರೂಪಿಸಿದರು.