ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದೊಂದಿಗೆ ಕಿರಿಮಂಜೇಶ್ವರದಲ್ಲಿ ಆಯೋಜಿಸಲಾಗಿದ್ದ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕ ದೇವಳದ ಪ್ರೌಢಶಾಲೆ ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ, ಸಹ ಶಿಕ್ಷಕಿ ಅಭಿನೇತ್ರಿ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಪುಜಾರಿ ಮತ್ತು ಹಳೆ ವಿದ್ಯಾರ್ಥಿ ಪ್ರದೀಪ್ ಭಟ್ ಪ್ರಶಸ್ತಿ ಸ್ವೀಕರಿಸಿದರು.