ಅಮಾಸೆಬೈಲು: ಕಾನೂನು ಮಾಹಿತಿ ಶಿಬಿರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಅಮಾಸೆಬೈಲು: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ಕಾನೂನು ಮಾಹಿತಿ ಶಿಬಿರ ಅಮವಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತದ ಸಭಾಂಗಣದಲ್ಲಿ ಜರುಗಿತು.

Call us

Click Here

ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಡಿ.ಪಿ ಕುಮಾರ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಸಿ, ಒಂದು ನ್ಯಾಯ ವ್ಯವಸ್ಥೆಯಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಲಾಗಿರುತ್ತದೆ. ಕಾನೂನು ಮತ್ತು ಆಡಳಿತ ವ್ಯವಸ್ಥೆ ಸುಗಮವಾಗಿ ಸಾಗಲು ಪ್ರತಿಯೊಬ್ಬರು ಕೂಡಾ ಹಕ್ಕುಗಳನ್ನು ಉಪಯೋಗಿಸಿ ಕರ್ತವ್ಯಗಳನ್ನು ಪಾಲಿಸಬೇಕಾಗುತ್ತದೆ ಎಂದರು.

ಕುಂದಾಪುರ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಸ್ವಸ್ಥ ಜೀವನಕ್ಕೆ ಮೂಲಭೂತ ಹಕ್ಕುಗಳು ಎಷ್ಟು ಅವಶ್ಯಕವೋ, ಮೂಲಭೂತ ಕರ್ತವ್ಯಗಳನ್ನು ತಿಳಿದಿರಬೇಕಾಗಿರುವುದು ಕೂಡಾ ಅಷ್ಟೇ ಮುಖ್ಯ ಎಂದರು.

ಮುಖ್ಯ ಅತಿಥಿಗಳಾಗಿ ಕುಂದಾಪುರ ಬಾರ್ ಅಸೋಸಿಯೇಷನ್ ಕುಂದಾಪುರ ಇದರ ಪ್ರಧಾನ ಕಾರ್ಯದರ್ಶಿ ಎಚ್. ರವೀಶ್ಚಂದ್ರ ಶೆಟ್ಟಿ, ಕುಂದಾಪುರದ ಸಹಾಯಕ ಸರಕಾರಿ ಅಭಿಯೋಜಕರಾದ ಸುಮಂಗಲಾ ನಾಯ್ಕ್, ಪೊಲೀಸ್ ಉಪನಿರೀಕ್ಷಕರಾದ ಸುದರ್ಶನ, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಅಮಾಸೆಬೈಲು ಇದರ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, ಕುಂದಾಪುರದ ವಕೀಲರಾದ ರವಿ ಶೆಟ್ಟಿ ಮಚ್ಚಟ್ಟು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅಮಾಸೆಬೈಲು ಒಕ್ಕೂಟದ ಅಧ್ಯಕ್ಷರಾದ ಲಕ್ಷ್ಮಣ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮಚ್ಚಟ್ಟು ಒಕ್ಕೂಟದ ಅಧ್ಯಕ್ಷರಾದ ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿ, ಕುಂದಾಪುರದ ವಕೀಲರಾದ ರಮೇಶ ಹತ್ವಾರ್ ಇವರು ಭಾರತದ ಸಂವಿಧಾನ ಜ್ಯಾರಿಗೊಂಡಾಗ ಅದರಲ್ಲಿ ಮೂಲಭೂತ ಕರ್ತವ್ಯಗಳ ಸೇರ್ಪಡೆ ಆಗಿರಲಿಲ್ಲ ೧೯೭೬ರಲ್ಲಿ ಸಂವಿಧಾನಕ್ಕೆ ೪೨ನೇ ತಿದ್ದುಪಡಿಯ ಮೂಲಕ ಮೂಲಭೂತ ಕರ್ತವ್ಯಗಳನ್ನು ಸೇರಿಸಲಾಯಿತು. ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗದೇ ಇರಬೇಕಾದರೆ ಮೂಲಭೂತ ಕರ್ತವ್ಯಗಳನ್ನು ಎಲ್ಲರೂ ಪಾಲಿಸಬೇಕು ಎಂದರು.

Click here

Click here

Click here

Click Here

Call us

Call us

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ರಿ.) ಅಮಾಸೆಬೈಲು ವಲಯದ ಮೇಲ್ವಿಚಾರಕಿ ಕುಮಾರಿ ಲಲಿತಾ ಸ್ವಾಗತಿಸಿ, ಸಮನ್ವಯ ಅಧಿಕಾರಿ ಶ್ರೀಮತಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು, ಸೇವಾಪ್ರತಿನಿಧಿ ಶ್ರೀಮತಿ ಪುಷ್ಪಲತಾ ಕಾಮತ್ ವಂದಿಸಿದರು.

Leave a Reply

Your email address will not be published. Required fields are marked *

1 × 1 =