ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ರೀಡೆಯನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಪ್ರಗತಿಯಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಆರೋಗ್ಯಕರವಾಗಿರಲು ಈ ಕ್ರೀಡೆ ಬಲು ಸಹಕಾರಿ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾದ್ಯಾಪಕ ಪ್ರೊ. ಚಂದ್ರಶೇಖರ ಶೆಟ್ಟಿ ವಡ್ಡರ್ಸೆಯವರು ಹೇಳಿದರು.
ಅವರು ಸ್ಥಳೀಯ ಆರ್.ಎನ್.ಶೆಟ್ಟಿ ಪದವಿಪೂರ್ವ ಕಾಲೇಜು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಹುಡುಗರ ಹಾಗೂ ಹುಡುಗಿಯರ ವಾಲಿಬಾಲ್ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸುತ್ತಾ ಹೇಳಿದರು.
ಇನ್ನೊರ್ವ ಮುಖ್ಯ ಅತಿಥಿ ತಾಲೂಕು ಯುವ ಸಬಲೀಕರಣ ಹಾಗೂ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿಯವರು ಮಾತನಾಡುತ್ತಾ ಆರೋಗ್ಯವಂತರಾಗಿರಲು ಈ ಕ್ರೀಡೆ ಬಲು ಸಹಕಾರಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಮಾತನಾಡಿ ನಮ್ಮೆಲ್ಲಾ ಸಂಸ್ಥೆಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸಮಾನವಾದ ಅವಕಾಶ ನೀಡುತ್ತದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕ್ರೀಡೆ ಬೇಕಾಗುತ್ತದೆ. ಆದ್ದರಿಂದ ಎಲ್ಲರೂ ಕ್ರೀಡೆಯನ್ನು ನಮ್ಮ ದೈನಂದಿನ ಕ್ರಿಯೆ ಎನ್ನುವ ರೀತಿಯಲ್ಲಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ನವೀನ ಕುಮಾರ ಶೆಟ್ಟಿಯವರು ಸ್ವಾಗತಿಸಿದರು. ಸಭೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಚಂದ್ರಶೇಖರ ದೋಮ, ಉಡುಪಿ ಜಿಲ್ಲಾ ಪದವಿಪೂರ್ವ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ನಾಗರಾಜ ಶೆಟ್ಟಿ, ಕೋಡಿ ಬ್ಯಾರೀಸ್ ಹೈಸ್ಕೂಲಿನ ದೈಹಿಕ ಶಿಕ್ಷಕ ಮಹಮ್ಮದ್ ಇಲ್ಯಾಸ್ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಕ ಪ್ರದೀಪ ಶೆಟ್ಟಿ ವಂದನೆಗೈದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಜಯಶೀಲಾ ಪೈ ಕಾರ್ಯಕ್ರಮ ನಿರ್ವಹಿಸಿದರು.
ಕ್ರೀಡೆಯನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಪ್ರಗತಿಯಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಆರೋಗ್ಯಕರವಾಗಿರಲು ಈ ಕ್ರೀಡೆ ಬಲು ಸಹಕಾರಿ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾದ್ಯಾಪಕ ಪ್ರೊ. ಚಂದ್ರಶೇಖರ ಶೆಟ್ಟಿ ವಡ್ಡರ್ಸೆಯವರು ಹೇಳಿದರು.