ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಮ್ಮ ಅಗತ್ಯಕ್ಕಿಂತ ಹೆಚ್ಚು ಸಮಯ ಆಸಕ್ತಿಗಳನ್ನು ತಂತ್ರಜ್ಞಾನದ ಬಳಕೆಗೆ ಮೀಸಲಾಗಿಟ್ಟರೆ, ಯುವ ವಿದ್ಯಾರ್ಥಿಗಳು ಬೌದ್ಧಿಕ ಬೆಳವಣಿಗೆಗೆ ಬೇಕಾದ ಸಮಯ ಮತ್ತು ಸಂಯಮವನ್ನು ಕಳೆದುಕೊಳ್ಳಬೇಕಾಗುತ್ತದೆ. ಬದಲಾಗಿ ಯುವ ಜನತೆಯು ಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಇತರರೊಂದಿಗೆ ಸಹನೆಯಿಂದ ಬಾಳಲು ಕಲಿಯಬೇಕು ಎಂದು ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನ ಕನ್ನಡಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ರೇಖಾ ವಿ ಬನ್ನಾಡಿ ಹೇಳಿದರು.
ಅವರು ಕುಂದಾಪುರದ ಆರ್.ಎನ್.ಶೆಟ್ಟಿ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷರಾದ ಕಾಲೇಜಿನ ಸಂಚಾಲಕರಾದ ಬಿ.ಎಂ ಸುಕುಮಾರ ಶೆಟ್ಟಿ ವಿದ್ಯಾರ್ಥಿಗಳು ಮನೋಸ್ಥೈರ್ಯವನ್ನು ವೃದ್ಧಿಸಿಕೊಳ್ಳಬೇಕೆಂಬ ಕಿವಿಮಾತು ಹೇಳಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಸೀತಾರಾಮ ನಕ್ಕತ್ತಾಯರವರು ವಿದ್ಯಾರ್ಥಿಗಳ ಸ್ಪರ್ಧೆಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು. ಆಂಗ್ಲಭಾಷಾ ಪ್ರಾದ್ಯಾಪಕಿ ಸುಮತಿ ಶೆಣೈಯವರು ಉದ್ಘಾಟಕರ ಪರಿಚಯ ಮಾಡಿದರು. ಆಂಗ್ಲಭಾಷಾ ಪ್ರಾಧ್ಯಾಪಕಿ ಲೋನಾ ಲೂಯಿಸ್‌ರವರು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ಬಹುಮಾನ ವಿತರಣಾ ಪಟ್ಟಿಯನ್ನು ವಾಚಿಸಿದರು. ಹಿಂದಿ ಪ್ರಾಧ್ಯಾಪಕಿ ಜಯಶೀಲಾ ಪೈಯವರು ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಡಿ.ಬಿ. ಕೃಷ್ಣಮೂರ್ತಿಯವರು ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿ ನಾಯಕ ಪ್ರಜ್ವಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.