ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್‌ನ ಉಪಾಧ್ಯಕ್ಷರನ್ನಾಗಿ ದಿನೇಶ್ ನಾಯ್ಕ್ ಅವರನ್ನು ಜಿಲ್ಲಾ ಐಟಿ ಸೆಲ್ ಅಧ್ಯಕ್ಷ ವಿಶ್ವಾಸ್ ಶೆಟ್ಟಿ ಅವರು ನೇಮಕ ಮಾಡಿದ್ದಾರೆ. ಬೈಂದೂರು ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ದಿನೇಶ್ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನಕುಮಾರ್ ಉಪಸ್ಥಿತರಿದ್ದರು.