ಜಿಲ್ಲಾ ಮಟ್ಟದ ಬಾಲಕರ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ವಲಯದ ಪೆರ್ವಾಜೆ ಸರಕಾರಿ ಪ್ರೌಢಶಾಲೆಯ ಬಾಲಕರ ತಂಡ ಹಾಗೂ ಕಾರ್ಕಳ ವಲಯದ ಎಸ್.ವಿ.ಟಿ. ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

Call us

Click Here

ಅಂತಿಮ ಹಣಾಹಣಿಯಲ್ಲಿ ಪೆರ್ವಾಜೆ ಸರಕಾರಿ ಪ್ರೌಢಶಾಲೆಯ ಬಾಲಕರ ತಂಡವು ಬ್ರಹ್ಮಾವರ ವಲಯದ ಎಸ್.ವಿ.ಎನ್.ಎನ್. ಆಂಗ್ಲ ಮಾಧ್ಯಮ ಶಾಲೆಯ ತಂಡವನ್ನು ಮತ್ತು ಕಾರ್ಕಳದ ಎಸ್.ವಿ.ಟಿ. ಕಾಲೇಜಿನ ಬಾಲಕಿಯರ ತಂಡವು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆದುಕೊಂಡಿತು.

ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗರಾಜ್ ಪೂಜಾರಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಮಧುಕರ ಎಸ್., ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯ್ಕ್ ಮತ್ತಿತರು ಉಪಸ್ಥಿತರಿದ್ದು ವಿಜೇತರರಿಗೆ ಬಹುಮಾನ ವಿತರಿಸಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಪ್ರಭಾರ ಉಪಪ್ರಾಂಶುಪಾಲೆ ಶ್ರೀಲತಾ ಸ್ವಾಗತಿಸಿದರು. ಸಹಶಿಕ್ಷಕ ಗೋಪಾಲ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಆದಿನಾಥ ಕಿಣಿ ವಂದಿಸಿದರು.

Leave a Reply