ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತಿಹಾಸ ಪ್ರಸಿದ್ದ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಒಂಬತ್ತು ದಿನಗಳ ಕಾಲ ನಡೆಯುವ ಶರನ್ನವರಾತ್ರಿ ಆಚರಣೆ ವಿದ್ಯುಕ್ತವಾಗಿ ಆರಂಭಗೊಂಡಿತು. ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ ದೀಪ ಪ್ರಜ್ವಲಿಸಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸೇವಾ ಸಮಿತಿಯ ಸದಸ್ಯರಾದ ಬಿ. ಮಾಧವ ರಾವ್, ಶಿವರಾಮ ಪೂಜಾರಿ, ಶಂಕರ ಮೊಗವೀರ, ರವೀಂದ್ರ ಶ್ಯಾನುಭಾಗ್, ನಾರಾಯಣಪ್ಪ ದೇವಾಡಿಗ, ಶ್ರೀನಿವಾಸ್ ಕುಮಾರ್, ಅಣ್ಣಪ್ಪ ಪಾತ್ರಿ ಮೊದಲಾದವರು ಉಪಸ್ಥಿತರಿದ್ದರು.

Call us

Click Here

ಪ್ರಧಾನ ಅರ್ಚಕ ಬಿ. ಕೃಷ್ಣಮೂರ್ತಿ ನಾವಡ ನೇತೃತ್ವದಲ್ಲಿ ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯವರೆಗೆ ಧಾರ್ಮಿಕ ವಿಧಿ ವಿಧಾನಗಳು, ಭಜನೆ ಇತ್ಯಾದಿ ನಡೆಯಲಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಪೂಜೆ, ಚಂಡಿಕಾ ಹೋಮ, ದುರ್ಗಾಹೋಮ, ಅನ್ನಸಂತರ್ಪಣೆ, ರಂಗಪೂಜೆ, ನಡೆಯಲಿದೆ.

Leave a Reply