ಹೆಮ್ಮಾಡಿಯಲ್ಲಿ ’ಮನೆ ಮನೆಗೆ ಕಾಂಗ್ರೆಸ್’ ಅಭಿಯಾನಕ್ಕೆ ಚಾಲನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೂರಾರು ಭರವಸೆಗಳನ್ನು ನೀಡಿತ್ತು. ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಅವುಗಳಲ್ಲಿ ಬಹುತೇಕ ಭರವಸೆಗಳನ್ನು ಈಡೇರಿಸಿದೆ. ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಅಭಿವೃದ್ಧಿ ಯೋಜನೆಗಳು ಆಗಿವೆ. ಚುನಾವಣೆ ಎದುರಾಗುತ್ತಿರುವ ಈ ಕಾಲದಲ್ಲಿ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ ಮತದಾರರಿಗೆ ಸರ್ಕಾರದ ಸಾಧನೆಯ ಲೆಕ್ಕ ಕೊಡುವ ಕೆಲಸ ಮಾಡಬೇಕು ಎಂದು ರಾಜ್ಯ ಸಭಾ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡೀಸ್ ಹೇಳಿದರು.

Call us

Click Here

ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಶನಿವಾರ ಹೆಮ್ಮಾಡಿಯಲ್ಲಿ ಆರಂಭವಾದ ’ಮನೆ ಮನೆಗೆ ಕಾಂಗ್ರೆಸ್’ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಸಾಧನೆ ಮಾಡಿ ಸುಮ್ಮನಾದರೆ ಚುನಾವಣೆ ಗೆಲ್ಲಲು ಸಾಧ್ಯವಾಗದು. ಅದರ ಕುರಿತು ಜನರಿಗೆ ತಿಳಿಹೇಳುವ ಅಗತ್ಯವಿದೆ. ಅದರೊಂದಿಗೆ ಯುವಜನರನ್ನು ಸೇರಿಸಿಕೊಂಡು ಸಂಘಟನೆ ಬಲಪಡಿಸುವ ಕಾರ್ಯವೂ ನಡೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ಗೋಪಾಲ ಪೂಜಾರಿ ಬೈಂದೂರು ಕ್ಷೇತ್ರದ ಎಲ್ಲ ೨೫೨ ಬೂತ್ ಮಟ್ಟದ ಸಮಿತಿಗಳು ನಿಗದಿತ ಅವಧಿಯೊಳಗೆ ಅಭಿಯಾನವನ್ನು ಮುಗಿಸಬೇಕು. ಕ್ಷೇತ್ರದಲ್ಲಿ ಒಟ್ಟು ೧೦೦೦ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿವೆ. ಸರ್ಕಾರದ ಸಾಧನೆಯ ಕೈಪಿಡಿಯನ್ನು ತಲಪಿಸುವುದರ ಜತೆಗೆ ಜನರು ಮುಂದಿಡುವ ಸಮಸ್ಯೆಗಳನ್ನೂ ದಾಖಲಿಸಿಕೊಳ್ಳಬೇಕು ಎಂದು ಹೇಳಿದರು.

ವಂಡ್ಸೆ ಬ್ಲಾಕ್ ಅಧ್ಯಕ್ಷ ಎಸ್. ಸಂಜೀವ ಶೆಟ್ಟಿ ಸ್ವಾಗತಿಸಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೈಂದೂರು ಸಮಿತಿ ಅಧ್ಯಕ್ಷ ಎಸ್. ಮದನ್‌ಕುಮಾರ್ ವಂದಿಸಿದರು. ಪ್ರಮುಖರಾದ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ಜ್ಯೋತಿ, ವಾಸುದೇವ ಯಡಿಯಾಳ, ಎಚ್. ಮಂಜಯ್ಯ ಶೆಟ್ಟಿ, ಜ್ಯೋತಿ ಭಂಡಾರಿ, ಶೇಖರ ಪೂಜಾರಿ, ಸತ್ಯನಾರಾಯಣ ಶೇರೆಗಾರ್, ಇತರರು ಇದ್ದರು

Leave a Reply